ತಿರುನೆಲ್ವೇಲಿ (ತಮಿಳುನಾಡು): ತಮಿಳು ನಟ ಶಿವ ಕಾರ್ತಿಕೇಯನ್ ಹಾಗೂ ಸಾಯಿ ಪಲ್ಲವಿ ನಟಿಸಿರುವ 'ಅಮರನ್ ಸಿನಿಮಾ' ಪ್ರದರ್ಶನಗೊಳ್ಳುತ್ತಿದ್ದ ಚಿತ್ರಮಂದಿರದ ಮೇಲೆ ಅಪರಿಚಿತ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ಮುಂಜಾನೆ ಇಬ್ಬರು ದುಷ್ಕರ್ಮಿಗಳು ಮೇಳಪಾಳ್ಯಂನ ಚಿತ್ರಮಂದಿರದ ಮೇಲೆ ಪೆಟ್ರೋಲ್ ಬಾಂಬ್‌ಗಳನ್ನು ಎಸೆದಿದ್ದಾರೆ. ಅವು ಸ್ಫೋಟಗೊಂಡಿವೆ. ಆದರೆ ಯಾರಿಗೂ ಗಾಯಗಳಾಗಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.
ಘಟನೆಯನ್ನು ತಮಿಳುನಾಡು ಬಿಜೆಪಿ ಉಪಾಧ್ಯಕ್ಷ ನಾರಾಯಣನ್ ತಿರುಪತಿ ತೀವ್ರವಾಗಿ ಖಂಡಿಸಿದ್ದಾರೆ. 'ತಮಿಳುನಾಡಿನ ಜನ ಈ ಸಿನಿಮಾವನ್ನು ಸ್ವಾಗತಿಸಿ, ದೊಡ್ಡ ಯಶಸ್ಸು ಗಳಿಸಲು ಸಹಕರಿಸಿದ್ದಾರೆ. ಇದನ್ನು ಅರಗಿಸಿಕೊಳ್ಳಲಾಗದೆ ಕೆಲವು ಮೂಲಭೂತವಾದಿ ಸಂಘಟನೆಗಳು ಚಿತ್ರ ಪ್ರದರ್ಶನವಾಗುತ್ತಿದ್ದ ಥಿಯೇಟರ್ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ' ಎಂದು ಜಾಲತಾಣ ‘ಎಕ್ಸ್’ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
'ಅಮರನ್' ದಿವಂಗತ ಸೇನಾ ಮೇಜರ್ ಮುಕುಂದ್ ವರದರಾಜನ್ ಜೀವನಾಧಾರಿತ ಚಿತ್ರ. ರಾಜ್‌ಕುಮಾರ್ ಪೆರಿಯಸ್ವಾಮಿ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.