ಬೆಂಗಳೂರು: ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶಿಸಿರುವ ತಮಿಳಿನ ‘ಪೊನ್ನಿಯಿನ್ ಸೆಲ್ವನ್’ಚಿತ್ರ ಬಾಕ್ಸ್ ಅಫೀಸ್‌ನಲ್ಲಿ ಧೂಳೆಬ್ಬಿಸಿದೆ.
ಚಿತ್ರ ಬಿಡುಗಡೆಯಾಗಿ ಮೂರೇ ದಿನಗಳಲ್ಲಿ ಗಳಿಕೆಯಲ್ಲಿವಿಶ್ವದಾದ್ಯಂತ ₹ 230 ಕೋಟಿ ಗಡಿ ದಾಟಿದ್ದು, ಇಂದು(ಅ.03) ₹ 250 ಕೋಟಿ ದಾಟಬಹುದು ಎಂದು ಊಹಿಸಲಾಗಿದೆ.
ಪೊನ್ನಿಯಿನ್ ಸೆಲ್ವನ್ ಭಾಗ-1 ಸೆಪ್ಟೆಂಬರ್ 30 ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗಿತ್ತು.
ಪೊನ್ನಿಯಿನ್ ಸೆಲ್ವನ್ ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರವು ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ₹ 230 ಕೋಟಿಗಳನ್ನು ಗಳಿಸಿದೆ ಎಂದುವಿಶ್ಲೇಷಕ ರಮೇಶ್ ಬಾಲಾ ಹೇಳಿದ್ದಾರೆ.
ನಿರ್ದೇಶಕ ಮಣಿರತ್ನಂ ಅವರ ಪೊನ್ನಿಯಿನ್ ಸೆಲ್ವನ್ ಚಿತ್ರ, ಕಾದಂಬರಿಕಾರ ಕಲ್ಕಿ ಕೃಷ್ಣಮೂರ್ತಿ ಅವರ ಪುಸ್ತಕಆಧಾರಿತ ಕಥೆಯಾಗಿದೆ.
ಚಿತ್ರದಲ್ಲಿ ಐಶ್ವರ್ಯಾ ರೈ ಬಚ್ಚನ್, ಚಿಯಾನ್ ವಿಕ್ರಮ್, ಕಾರ್ತಿ, ತ್ರಿಶಾ ಮತ್ತು ಜಯಂ ರವಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಎ ಆರ್ ರೆಹಮಾನ್ ಸಂಗೀತ ನಿರ್ದೇಶನ, ರವಿವರ್ಮನ್ ಛಾಯಾಗ್ರಹಣ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.