ಅಶ್ಲೀಲ ವಿಡಿಯೊ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪೂನಂ ಪಾಂಡೆಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ಇದರಿಂದ ನಟಿಗೆ ಬಿಗ್ ರಿಲೀಪ್ ಸಿಕ್ಕಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ಪೂನಂ ಪಾಂಡೆ ವಿರುದ್ಧ ಎಪ್‌ಐಆರ್ ದಾಖಲಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಪೂನಂ ಪಾಂಡೆ ನಿರೀಕ್ಷಣಾಜಾಮೀನು ನೀಡುವಂತೆ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು.
ಬಾಂಬೆ ಹೈಕೋರ್ಟ್ ಪೂನಂ ಪಾಂಡೆಯ ಜಾಮೀನು ಅರ್ಜಿಯನ್ನು ನವೆಂಬರ್ ತಿಂಗಳಲ್ಲಿ ತಿರಸ್ಕಾರ ಮಾಡಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ಗೆ ಹೋಗಿದ್ದರು. ಕಳೆದ ಡಿಸೆಂಬರ್‌ನಲ್ಲಿ ಇದೇಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ರಾಜ್ ಕುಂದ್ರಾಗೆ ನ್ಯಾಯಾಲಯ ಜಾಮೀನು ನೀಡಿತ್ತು.
ಇದೀಗ ಪೂನಂ ಪಾಂಡೆಗೆ ನ್ಯಾಯಾಲಯ ಜಾಮೀನು ನೀಡಿರುವುದರಿಂದ ಅವರು ಬಂಧನ ಭೀತಿಯಿಂದ ತಪ್ಪಿಸಿಕೊಂಡಿದ್ದಾರೆ.
ಅಶ್ಲೀಲ ವಿಡಿಯೊ ನಿರ್ಮಾಣ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ, ಶೆರ್ಲಿನ್ ಚೋಪ್ರಾ, ಪೂನಂ ಪಾಂಡೆ ಸೇರಿದಂತೆ ಹಲವು ನಟಿಯರು ಭಾಗಿಯಾಗಿದ್ದಾರೆ ಎಂದು ಮಹಾರಾಷ್ಟ್ರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈಗಾಗಲೇ ರಾಜ್ ಕುಂದ್ರಾ ಅವರನ್ನು ಬಂಧಿಸಿ ಬಿಡುಗಡೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.