ಹೈದರಾಬಾದ್: ‘ಬಾಹುಬಲಿ’ ಖ್ಯಾತಿಯ ತೆಲುಗು ನಟ ಪ್ರಭಾಸ್ –ಅನುಷ್ಕಾ ಶೆಟ್ಟಿ ಜೋಡಿ ಮತ್ತೆ ಜೊತೆಯಾಗಿ ಅಭಿನಯಿಸಲಿದ್ದಾರೆ.
ಟಾಲಿವುಡ್ ಅಂಗಳದಲ್ಲಿ ‘ಬಾಹುಬಲಿ’ ಸಿನಿಮಾ ಎಂದ ಕೂಡಲೇ ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ಹೆಸರು ನೆನಪಾಗುತ್ತದೆ. ಸಿನಿಮಾಗೆ ಸಂಬಂಧಿಸಿದ ಸುದ್ದಿ ಮಾತ್ರವಲ್ಲ, ಅವರ ವೈಯಕ್ತಿಕ ಜೀವನದ ಬಗ್ಗೆಯೂ ಸಾಕಷ್ಟು ವದಂತಿಗಳು ಹರಿದಾಡಿದ್ದವು. ಈ ಜೋಡಿ ಮದುವೆ ಆಗಲಿದ್ದಾರೆ ಎಂದು ಮಾತುಗಳು ಕೇಳಿಬಂದಿದ್ದವು.
ಸದ್ಯ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಚಿತ್ರೀಕರಣದಲ್ಲಿ ಪ್ರಭಾಸ್ ಬ್ಯುಸಿಯಾಗಿದ್ದಾರೆ. ಆದರೆ, ಅನುಷ್ಕಾ ಶೆಟ್ಟಿ ಚಿತ್ರರಂಗದಿಂದ ದೂರ ಉಳಿದಿದ್ದಾರೆ.
ಇದೀಗ ಈ ಜೋಡಿ ಮತ್ತೆ ಒಂದಾಗಿ ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯದಲ್ಲೇ ಅಧಿಕೃತ ಘೋಷಣೆ ಕೂಡ ಆಗಲಿದೆ ಎಂದು ವರದಿಯಾಗಿದೆ.
ನಿರ್ದೇಶಕ ಮಾರುತಿ ಹೊಸ ಸಿನಿಮಾವನ್ನು ಕೈಗೆತ್ತಿಕೊಂಡಿದ್ದು, ಈ ಸಿನಿಮಾದಲ್ಲಿ ಪ್ರಭಾಸ್ ನಾಯಕನಾದರೆ, ಅನುಷ್ಕಾ ಶೆಟ್ಟಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರು ಈಗಾಗಲೇ ಇಬ್ಬರಿಗೂ ಸಿನಿಮಾದ ಕಥೆಯನ್ನು ಹೇಳಿದ್ದಾರೆ. ಈ ಚಿತ್ರದಲ್ಲಿ ನಟಿಸಲು ಈ ಜೋಡಿ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ.
ಓದಿ....
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.