ಹೊಸಪೇಟೆ (ವಿಜಯನಗರ): ಇಲ್ಲಿನ ಉದ್ಯಮಿ, ಪುನೀತ್ ರಾಜಕುಮಾರ್ ನಟನೆಯ ‘ಜೇಮ್ಸ್’ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ (41) ಅವರ ಆರೋಗ್ಯದಲ್ಲಿ ಮಂಗಳವಾರ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಮವಾರ ರಾತ್ರಿ ಬೆಂಗಳೂರಿನ ಮನೆಯಲ್ಲಿ ಒಬ್ಬರೇ ಇದ್ದಾಗ ರಕ್ತದೊತ್ತಡ ಹೆಚ್ಚಾಗಿ ಕುಸಿದು ಬಿದ್ದಿದ್ದಾರೆ. ಅನಂತರ ಸಂಬಂಧಿಕರಿಗೆ ವಿಷಯ ಗೊತ್ತಾಗಿ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರ ಸ್ನೇಹಿತರು ತಿಳಿಸಿದ್ದಾರೆ.
ಚಾಮರಾಜನಗರ: ಅಭಿಮಾನಿ ಅಂಗಡಿಯಲ್ಲಿ ಚಹಾ ಕುಡಿದ ಶಿವಣ್ಣ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.