ಬೆಂಗಳೂರು: ಜ್ಯೂ.ಚಿರು ಎಂದೇ ಕರೆಯಲ್ಪಡುವ ದಿವಂಗತ ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ಅವರ ಮಗ ರಾಯನ್ ರಾಜ್ ಸರ್ಜಾಗೆ ಇಂದು (ಶುಕ್ರವಾರ) ಮೊದಲ ಜನ್ಮದಿನದ ಸಂಭ್ರಮ.
ಮಗನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಟಿ ಮೇಘನಾ, ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ರಾಯನ್ ಜೊತೆಗಿರುವ ಫೋಟೊವೊಂದನ್ನು ಹಂಚಿಕೊಂಡಿದ್ದು, ಶುಭ ಕೋರಿದ್ದಾರೆ.
‘ನಮ್ಮ ಮಗು, ನಮ್ಮ ಪ್ರಪಂಚ, ನಮ್ಮ ಜಗತ್ತು, ನಮ್ಮ ಸರ್ವಸ್ವ! ಚಿರು.. ನಮ್ಮ ರಾಜಕುಮಾರನಿಗೆ ಈಗ ಒಂದು ವರ್ಷ’ ಎಂಬ ಅಡಿ ಬರಹದೊಂದಿಗೆ ಮಗನ ಹುಟ್ಟುಹಬ್ಬದ ಸಂದೇಶವನ್ನು ಬರದುಕೊಂಡಿದ್ದಾರೆ. ಈ ಪೋಸ್ಟ್‌ಗೆ ನಿರ್ದೇಶಕ ಪನ್ನಗ ಭರಣ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಕಾಮೆಂಟ್ ಮಾಡುವ ಮೂಲಕ ರಾಯನ್‌ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ಇದನ್ನೂ ಓದಿ... ಮತ್ತೆ ತೆರೆಯ ಮೇಲೆ ಮೇಘನಾ, ಹೊಸ ಚಿತ್ರದಲ್ಲಿ ನಟನೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.