ಬೆಂಗಳೂರು: ಚಂದನವನದ ನಟಿ ರಾಧಿಕಾ ಕುಮಾರಸ್ವಾಮಿ ಅವರು ಡ್ಯಾನ್ಸ್ ಮಾಡುವಾಗ ಜಾರಿ ಬಿದ್ದಿದ್ದಾರೆ. ಅವರೇ ಹಂಚಿಕೊಂಡಿರುವ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಕಳೆದ ಎರಡು ದಶಕಗಳಿಂದ ಸಿನಿಮಾರಂಗದಲ್ಲಿ ಇರುವ ಅವರು ಅಪಾರ ಪ್ರಮಾಣದಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಇತ್ತೀಚೆಗೆ ಅವರು ಡ್ಯಾನ್ಸ್ ಮಾಡುವಾಗ ಜಾರಿ ಬಿದ್ದಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೊ ಗಮನಿಸಿರುವ ಅಭಿಮಾನಿಗಳು ಬಗೆಬಗೆಯ ಕಾಮೆಂಟ್ ಮಾಡುತ್ತಿದ್ದಾರೆ.
ರಾಧಿಕಾ ಕುಮಾರಸ್ವಾಮಿ ನೋಡಿಕೊಂಡು, ಜಾಗ್ರತೆಯಿಂದ ಡ್ಯಾನ್ಸ್ ಮಾಡಬೇಕು ಎಂದು ಕೆಲವರು ಹೇಳಿದ್ದಾರೆ. ಸೋಂಟಕ್ಕೆ ಗಾಯವಾದರೆ ಸಮಸ್ಯೆಯಾಗಬಹುದು ಆದ್ದರಿಂದ ಅತಿಯಾದ ಉತ್ಸಾಹ ಬೇಡ ಎಂದು ಕೆಲವರು ಹೇಳಿದ್ದಾರೆ. ಡ್ಯಾನ್ಸ್ ಮಾಡುವಾಗ ಕಾಲುಗಳು ಜಾರದಂತೆ ಇರುವ ನೆಲಹಾಸು ಹಾಕಿ ಕೊಳ್ಳಬೇಕು ಎಂದು ಕೆಲ ನೆಟ್ಟಿಗರು ಸಲಹೆ ಮಾಡಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಕ್ರೇಜ್ ಹೊಂದಿರುವ ರಾಧಿಕಾ ಕುಮಾರಸ್ವಾಮಿ ಅಭಿಮಾನಿಗಳಿಗಾಗಿ ವಿಡಿಯೊ, ಫೋಟೊಗಳನ್ನು ಹಂಚಿಕೊಳ್ಳುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.