ADVERTISEMENT

ಅಶ್ಲೀಲ ಚಿತ್ರಗಳ ನಿರ್ಮಾಣ: ರಾಜ್‌ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಜುಲೈ 2021, 8:54 IST
Last Updated 27 ಜುಲೈ 2021, 8:54 IST
ರಾಜ್‌ ಕುಂದ್ರಾ
ರಾಜ್‌ ಕುಂದ್ರಾ   

ಮುಂಬೈ:ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ಕೆಲವು ಆ್ಯಪ್‌ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪ ಪ್ರಕರಣದಲ್ಲಿ ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾನನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಪ್ರಕರಣದಲ್ಲಿರಾಜ್‌ ಕುಂದ್ರಾ ಸೇರಿದಂತೆ ಪೊಲೀಸ್‌ ವಶದಲ್ಲಿರುವ ಎಲ್ಲಾ 10 ಆರೋಪಿಗಳಿಗೂ14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮುಂಬೈ ಅಪರಾಧ ವಿಭಾಗದ ಪೊಲೀಸರು ಕುಂದ್ರಾ ಅವರನ್ನು ಜುಲೈ 19ರಂದು ಬಂಧಿಸಿದ್ದರು. ನಂತರ ಆರೋಪಿಗಳನ್ನು ಇಂದಿನವರೆಗೂ (ಜುಲೈ 27) ಪೊಲೀಸ್‌ ವಶಕ್ಕೆ ನೀಡಲಾಗಿತ್ತು. ಈ ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿಯಾಗಿದ್ದುನಮ್ಮ ಬಳಿ ಸಾಕಷ್ಟು ಪುರಾವೆಗಳಿವೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

‘ಅಶ್ಲೀಲ ಚಿತ್ರಗಳ ತಯಾರಿ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್‌ಗಳ ಮೂಲಕ ಬಿತ್ತರಿಸುತ್ತಿರುವ ಬಗ್ಗೆ 2021ರ ಫೆಬ್ರುವರಿಯಲ್ಲಿ ಮುಂಬೈನ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿತ್ತು.

ಇದುವರೆಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಜನರನ್ನು ಬಂಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.