ನವದೆಹಲಿ: ಸೂಪರ್ಸ್ಟಾರ್ ರಜನಿಕಾಂತ್ ಮತ್ತು ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಟನೆಯ ತಮಿಳಿನ ಆ್ಯಕ್ಷನ್–ಥ್ರಿಲ್ಲರ್ ಸಿನಿಮಾ ‘ವೆಟ್ಟೈಯನ್' ನವೆಂಬರ್ 8 ರಂದು ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಬಿಡುಗಡೆಯಾಗಲಿದೆ.
ಟಿ. ಜೆ. ಜ್ಞಾನವೇಲ್ ನಿರ್ದೇಶನದ ‘ವೆಟ್ಟೈಯನ್’ ಅಕ್ಟೋಬರ್ 10ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ರಜನಿಕಾಂತ್, ಅಮಿತಾಭ್ ಬಚ್ಚನ್ರಂತಹ ಮೇರು ನಟರ ಜತೆಗೆ ಮಲಯಾಳಂ ನಟ ಫಹಾದ್ ಫಾಸಿಲ್, ಟಾಲಿವುಡ್ ನಟ ರಾಣಾ ದಗ್ಗುಬಾಟಿ, ದುಶಾರ ವಿಜಯನ್, ಮಂಜು ವಾರಿಯರ್, ರಿತಿಕಾ ಸಿಂಗ್ ಮತ್ತು ಅಭಿರಾಮಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.
ಭಾರತ ಮತ್ತು ಪ್ರಪಂಚದಾದ್ಯಂತ 240 ದೇಶಗಳಲ್ಲಿ ತಮಿಳಿನ ವೆಟ್ಟೈಯನ್ ಬಿಡುಗೆಯಾಗಲಿದೆ. ತೆಲುಗು, ಕನ್ನಡ, ಮಲಯಾಳ ಮತ್ತು ಹಿಂದಿಯಲ್ಲಿಯೂ ಚಿತ್ರವನ್ನು ಡಬ್ ಮಾಡಲಾಗಿದೆ ಎಂದು ಚಿತ್ರತಂಡ ತಿಳಿಸಿದೆ.
ಚಿತ್ರದಲ್ಲಿ ಅಮಿತಾಬ್ ಬಚ್ಚನ್ ನ್ಯಾಯಾಧೀಶರಾಗಿ ಕಾಣಿಸಿಕೊಂಡಿದ್ದು, ರಜನಿಕಾಂತ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಮಿಂಚಿದ್ದಾರೆ. ಲೈಕಾ ಪ್ರೊಡಕ್ಷನ್ ಚಿತ್ರ ನಿರ್ಮಾಣ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.