ಮುಂಬೈ: ಬಾಲಿವುಡ್ ನಟಿ ರಾಖಿ ಸಾವಂತ್ ಅವರನ್ನು ಮದುವೆಯಾಗಿರುವುದಾಗಿ ಮೈಸೂರು ಮೂಲದ ಉದ್ಯಮಿ ಆದಿಲ್ ಖಾನ್ ದುರಾನಿ ಖಚಿತಪಡಿಸಿದ್ದಾರೆ.
ಈ ಕುರಿತಂತೆ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕಿರುವ ಅವರು, ಅಂತಿಮವಾಗಿ ನಾನು ಇಲ್ಲೊಂದು ಘೋಷಣೆ ಮಾಡುತ್ತಿದ್ದೇನೆ. ನಾನು ನಿನ್ನನ್ನು ಮದುವೆಯಾಗಿಲ್ಲ ಎಂದು ಎಲ್ಲಿಯೂ ಹೇಳಿಲ್ಲ ರಾಖಿ. ಕೆಲವು ವಿಷಯಗಳನ್ನು ನಿಭಾಯಿಸಬೇಕಿದ್ದರಿಂದ ಮೌನವಾಗಿದ್ದೆ. ‘ನಮ್ಮಿಬ್ಬರ ದಾಂಪತ್ಯ ಜೀವನಕ್ಕೆ ಶುಭಕಾಮನೆಗಳು ರಾಖಿ(ಪಪ್ಪುಡಿ)’ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಜೊತೆಗೆ ಮದುವೆಯ ಚಿತ್ರವನ್ನು ಹಂಚಿಕೊಂಡಿದ್ದಾರೆ.
ಆದಿಲ್ ಪೋಸ್ಟ್ಗೆ ಪ್ರತಿಕ್ರಿಯಿಸಿರುವ ರಾಖಿ ಸಾವಂತ್, ನಿಮ್ಮ ಪ್ರೀತಿಗೆ ಧನ್ಯವಾದಗಳು ಜಾನ್(ಕೈಮುಗಿಯುತ್ತಿರುವ ಎಮೊಜಿ) ಎಂದು ಹೇಳಿದ್ದಾರೆ.
ಈ ಹಿಂದೆ ಸುದ್ದಿವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಆದಿಲ್ ಖಾನ್, ತಮ್ಮಿಬ್ಬರ ನಡುವಿನ ಸ್ನೇಹದ ಬಗ್ಗೆ ಹೇಳಿಕೊಂಡಿದ್ದರು. ಮನೆಯವರಿಗೂ ಅದು ಗೊತ್ತಿದೆ. ಅದಕ್ಕೆ ಮದುವೆಯ ಅರ್ಥ ನೀಡಲು ಅವರ ಒಪ್ಪಿಗೆಗಾಗಿ ಕಾಯುತ್ತಿರುವ ಎಂದಿದ್ದರು.
ಈ ನಡುವೆ, ಮದುವೆಯ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರದಾಡಿದ್ದವು. ಇದೀಗ, ಆದಿಲ್ ಮದುವೆಯನ್ನು ಖಚಿತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.