ADVERTISEMENT

ರಾಣಾ ದಗ್ಗುಬಾಟಿ–ಮಿಹೀಕಾ ಸಂಸಾರದಲ್ಲಿ ಬಿರುಕು? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಆಗಸ್ಟ್ 2022, 7:21 IST
Last Updated 9 ಆಗಸ್ಟ್ 2022, 7:21 IST
ರಾಣಾ ದಗ್ಗುಬಾಟಿ–ಮಿಹೀಕಾ
ರಾಣಾ ದಗ್ಗುಬಾಟಿ–ಮಿಹೀಕಾ    

ಟಾಲಿವುಡ್‌ ಸ್ಟಾರ್‌ ನಟ ರಾಣಾ ದಗ್ಗುಬಾಟಿ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಎಲ್ಲಾ ಫೋಟೊಗಳನ್ನು ಡಿಲೀಟ್‌ ಮಾಡುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಸೇರಿದಂತೆ ನೆಟ್ಟಿಗರು ಚರ್ಚೆ ಮಾಡುತ್ತಿದ್ದಾರೆ. ರಾಣಾ ಅವರು ರೂಪದರ್ಶಿ ಮಿಹೀಕಾ ಬಜಾಜ್‌ ಅವರನ್ನು ಮದುವೆಯಾಗಿದ್ದು ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿರುವ ಸಂದರ್ಭದಲೇ ಫೋಟೊಗಳನ್ನು ಡಿಲೀಟ್‌ ಮಾಡಿದ್ದಾರೆ.

ಈ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. ರಾಣಾ ಮತ್ತು ಮಿಹೀಕಾ ಬಜಾಜ್‌ ಸಂಸಾರದಲ್ಲಿ ಬಿರುಕು ಮೂಡಿದ್ದು ಅವರು ಪರಸ್ಪರ ದೂರವಾಗುತ್ತಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ತೆಲುಗಿನ ಮಾಧ್ಯಮಗಳು ಕೂಡ ರಾಣಾ, ಮಿಹೀಕಾ ನಡುವೆ ವೈಮನಸ್ಸು ಮೂಡಿದೆ ಎಂದು ವರದಿ ಪ್ರಕಟಿಸಿವೆ.

ರಾಣಾ ಅವರು ಕೆಲವು ದಿನಗಳ ಮಟ್ಟಿಗೆ ಸಾಮಾಜಿಕ ಜಾಲತಾಣಗಳಿಂದ ದೂರ ಇರಲು ನಿರ್ಧರಿಸಿದ್ದಾರೆ. ಹೀಗಾಗಿ ಎಲ್ಲಾ ಫೋಟೊಗಳನ್ನು ಡಿಲೀಟ್‌ ಮಾಡಿದ್ದಾರೆ. ಅವರ ಸಂಸಾರದಲ್ಲಿ ಯಾವುದೇ ಬಿರುಕು ಮೂಡಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ.

ಸಾಮಾಜಿಕ ಮಾಧ್ಯಮಗಳಿಂದ ದೂರ ಇರುವ ಸಲುವಾಗಿ ಎಲ್ಲಾ ಫೋಟೊಗಳನ್ನು ಡಿಲೀಟ್‌ ಮಾಡಬೇಕೆ? ಅದರಲ್ಲೂ ಪತ್ನಿ ಮಿಹೀಕಾ ಅವರ ಜತೆ ಇರುವ ಫೋಟೊಗಳನ್ನು ಯಾಕೆ ಡಿಲೀಟ್‌ ಮಾಡಿದ್ದಾರೆ? ಎಂಬ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.

ರಾಣಾ ಸಂಸಾರದ ಬಗ್ಗೆ ತೆಲುಗಿನ ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿವೆ. ಇತ್ತ ಮಿಹೀಕಾ ವಿವಾಹ ವಾರ್ಷಿಕೋತ್ಸವ ಸಂಭ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ರಾಣಾ ಜೊತೆಗಿರುವ ಫೋಟೊಗಳನ್ನು ಹಂಚಿಕೊಂಡಿದ್ದಾರೆ.

ಇವುಗಳನ್ನೂ ಓದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.