ಬೆಂಗಳೂರು: ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ ಈಗ ಬಾಲಿವುಡ್ನಲ್ಲೂ ಹೆಸರು ಮಾಡುತ್ತಿದ್ದಾರೆ.
ರಶ್ಮಿಕಾ ನಟನೆಯ ಮೊದಲ ಬಾಲಿವುಡ್ ಚಿತ್ರ ‘ಮಿಷನ್ ಮಜ್ನು’ ಚಿತ್ರೀಕರಣ ಪೂರ್ಣವಾಗಿದೆ. ಈ ಬಗ್ಗೆ ಅವರು ಸಂತಸ ಹಂಚಿಕೊಂಡಿದ್ದಾರೆ.
ಇದು ನನ್ನ ಮೊದಲ ಹಿಂದಿ ಚಿತ್ರ, ಚಿತ್ರೀಕರಣ ಸಮಯದಲ್ಲಿ ನಾನು ತಂಡದೊಂದಿಗೆ ಸಂತಸದ ಸಮಯವನ್ನು ಕಳೆದಿದ್ದೇನೆ. ಸ್ಕ್ರಿಪ್ಟ್ ಕೇಳಿದ ಮೊದಲ ದಿನವೇ ನಾನು ಈ ಚಿತ್ರದ ಭಾಗವಾಗಬೇಕು ಎಂದು ಅನಿಸಿತ್ತು ಎಂದು ರಶ್ಮಿಕಾ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸಿದ್ಧಾರ್ಥ ಮಲ್ಹೋತ್ರಾ ಈ ಚಿತ್ರದಲ್ಲಿ ರಾ ಏಜೆಂಟ್ ಆಗಿ ಕಾಣಿಸಿಕೊಂಡಿದ್ದಾರೆ.
ನಟಿ ರಶ್ಮಿಕಾ ಅವರಿಗೆ ಇದು ಮೊದಲ ಬಾಲಿವುಡ್ ಚಿತ್ರವಾಗಿದ್ದರೆ, ಶಂತನು ಬಾಗ್ಚಿ ಅವರು ನಿರ್ದೇಶನ ಮಾಡುತ್ತಿರುವ ಮೊದಲ ಬಾಲಿವುಡ್ ಸಿನಿಮಾ ಆಗಿರುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.