ಚಂದನವನದ ನಟರವಿಚಂದ್ರನ್ ಅವರ ಹಿರಿಯ ಪುತ್ರ ನಟ ಮನೋರಂಜನ್ (ಮನು) ಸಂಗೀತಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಭಾನುವಾರ ಬೆಳಗ್ಗೆ8.30ರ ಶುಭ ಮುಹೂರ್ತದಲ್ಲಿ ಮಾಂಗಲ್ಯ ಧಾರಣೆ ಮಾಡುವ ಮೂಲಕ ಸಂಗೀತಾರನ್ನು ವರಿಸಿದ್ದಾರೆ. ಸಂಗೀತಾ ಅವರು ರವೀಚಂದ್ರನ್ ಕುಟುಂಬದ ದೂರದ ಸಂಬಂಧಿಯಾಗಿದ್ದಾರೆ.ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‌ನತ್ರಿಪುರವಾಸಿನಿಯಲ್ಲಿ ಮದುವೆ ನಡೆಯಿತು.
ಈ ಶುಭ ಘಳಿಗೆಯಲ್ಲಿ ಚಿತ್ರರಂಗದ ಗಣ್ಯರು ಸೇರಿದಂತೆ ಎರಡು ಕುಟುಂಬದವರು, ಸಂಬಂಧಿಕರು, ಆಪ್ತರು ಹಾಗೂ ಗೆಳೆಯರು ಭಾಗವಹಿಸಿದ್ದರು.
ಚಂದನವದ ತಾರೆಗಳಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‌ಕುಮಾರ್,ಶರಣ್, ನಟಿ ಖುಷ್ಬೂ, ಉಮಾಶ್ರೀ, ಹಂಸಲೇಖಾ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇಂದು ಸಂಜೆಆರತಕ್ಷತೆ ನಡೆಯಲಿದ್ದು, ಚಿತ್ರರಂಗದ ಗಣ್ಯರು, ಕೆಲ ರಾಜಕಾರಣಿಗಳು ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.