ಮುಂಬೈ: ಬಾಲಿವುಡ್ನಲ್ಲಿ ವಿವಾದಗಳಿಂದಲೇ ಸುದ್ದಿಯಾಗಿರುವ ನಟಿ ಕಂಗನಾ ರನೌತ್ ಅಭಿನಯದ ‘ಎಮರ್ಜೆನ್ಸಿ’ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ.
ಈ ಕುರಿತು ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿರುವ ಕಂಗನಾ, ‘ಈ ಹಿಂದೆ ನಾವು ‘ಎಮರ್ಜೆನ್ಸಿ’ ಚಿತ್ರವನ್ನು 2023 ನವೆಂಬರ್ನಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿದ್ದೇವು. ಆದರೆ, ನಾನು ಇತರೆ ಚಿತ್ರಗಳಲ್ಲಿ ಬ್ಯುಸಿಯಾಗಿರುವುದರಿಂದ ಈ ಚಿತ್ರವನ್ನು (ಎಮರ್ಜೆನ್ಸಿ) ಮುಂದಿನ ವರ್ಷಕ್ಕೆ (2024) ಬಿಡುಗಡೆ ಮಾಡಲು ನಿರ್ಧರಿಸಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.
ಈ ಚಿತ್ರದಲ್ಲಿ ನಟಿ ಕಂಗನಾ ರನೌತ್ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಮಣಿಕರ್ಣಿಕಾ ಫಿಲಂಸ್ ನಿರ್ಮಾಣದ ಕಂಗನಾ ರನೌತ್ ನಿರ್ದೇಶನದ ‘ಎಮರ್ಜೆನ್ಸಿ‘ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಈಚೆಗೆ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿತ್ತು.
1975ರ ಜೂನ್ 25ರಂದು ದೇಶದಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಘೋಷಿಸಿದ್ದರು. 1977ರ ಮಾರ್ಚ್ 21ರವರೆಗೂ ತುರ್ತು ಪರಿಸ್ಥಿತಿ ಮುಂದುವರಿದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.