ADVERTISEMENT

ಹೊರಬಂತು ‘ರೂಪಾಂತರ’ ಟ್ರೇಲರ್ 

​ಪ್ರಜಾವಾಣಿ ವಾರ್ತೆ
Published 17 ಜುಲೈ 2024, 18:36 IST
Last Updated 17 ಜುಲೈ 2024, 18:36 IST
ರಾಜ್ ಬಿ ಶೆಟ್ಟಿ
ರಾಜ್ ಬಿ ಶೆಟ್ಟಿ   

ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ ‘ರೂಪಾಂತರ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ‌. ಹಲವು ಬಗೆಯ ವ್ಯಕ್ತಿಗಳು ರೂಪಾಂತರಗೊಳ್ಳುವ ಕಥೆಯನ್ನು ಹೊಂದಿರುವ ಈ ಚಿತ್ರ ಜುಲೈ 26 ರಂದು ಬಿಡುಗಡೆಯಾಗುತ್ತಿದೆ. 

‘ನಾವು ಮಂಗಳೂರಿನಲ್ಲಿ ಸಿನಿಮಾ ಮಾಡಬೇಕಾದರೆ ಮಾರ್ಕೇಟ್ ಬೇಡಿಕೆಗೂ ಹೊರತಾದ ಒಳ್ಳೆಯ ಸಿನಿಮಾಗಳನ್ನು ಮಾಡಬೇಕು. ಆಗ ಜನರು ಸಿನಿಮಾಗಳನ್ನು ನೋಡುತ್ತಾರೆ ಎಂಬ ಉದ್ದೇಶದಿಂದ ಸಿನಿಮಾ ಮಾಡಲು ಆರಂಭಿಸಿದ್ದೆವು. ಅದೇ ಉದ್ದೇಶದಿಂದ ಈ ಸಿನಿಮಾವನ್ನು ಮಾಡಿದ್ದೇವೆ. ‘ರೂಪಾಂತರ’ ನನಗೆ ಬಹಳ ಇಷ್ಟವಾದ ಸಿನಿಮಾ. ಏಕೆಂದರೆ ಈ ಚಿತ್ರದಲ್ಲಿ ನಾನು ನಟ ಮಾತ್ರ. ಸಂಭಾಷಣೆಗೆ ಸ್ವಲ್ಪ ಸಹಾಯ ಮಾಡಿದ್ದೇನೆ. ಮಿಕ್ಕಿದೆಲ್ಲಾ ಈ ತಂಡದ ಕನಸು. ನನ್ನ ಬಿಟ್ಟು ಬೇರೆ ಮುಖ್ಯಪಾತ್ರಗಳು ಈ ಚಿತ್ರದಲ್ಲಿದೆ. ‘ಒಂದು ಮೊಟ್ಟೆಯ ಕಥೆ’ ಚಿತ್ರ ಮಾಡಿದ ತಂಡದೊಂದಿಗೆ ಈ ಚಿತ್ರ ಮಾಡಿರುವುದು ಖುಷಿಯಾಗಿದೆ’ ಎಂದರು ರಾಜ್ ಬಿ ಶೆಟ್ಟಿ. 

ಮಿಥಿಲೇಶ್ ಎಡವಲತ್ ಚಿತ್ರದ ನಿರ್ದೇಶಕ. ‘ಮಂಗಳೂರಿನವರು ಮಂಗಳೂರಿಗರಿಗೆ ಸಿನಿಮಾ ಮಾಡುತ್ತಾರೆ ಎಂಬ ಮಾತಿದೆ‌. ಆದರೆ ಈ ಚಿತ್ರವನ್ನು ನಾವು ಬೆಂಗಳೂರಿನಲ್ಲಿ ಮಾಡಿದ್ದೇವೆ‌. ರಾಜ್ ಬಿ ಶೆಟ್ಟಿ ಅವರನ್ನು ಹೊರತುಪಡಿಸಿ ಮಿಕ್ಕೆಲ್ಲ ನಟರು ಬೇರೆ ಬೇರೆ ಪ್ರಾಂತ್ಯದವರು’ ಎಂದರು ನಿರ್ಮಾಪಕ ಸುಹಾನ್ ಪ್ರಸಾದ್.

ADVERTISEMENT

ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮತ್ತಿರರ ತಾರಗಣ ಈ ಚಿತ್ರಕ್ಕಿದೆ. ಮಿದುನ್‌ ಮುಕುಂದನ್‌ ಸಂಗೀತ, ಪ್ರವೀಣ್ ಶ್ರೀಯಾನ್ ಛಾಯಾಚಿತ್ರಗ್ರಹಣ, ಭುವನೇಶ್ ಮಣಿವಣ್ಣನ್ ಸಂಕಲನ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.