ಬೆಂಗಳೂರು: ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರ ಪ್ಯಾನ್ ಇಂಡಿಯಾ ಸಿನಿಮಾ ಆರ್‌ಆರ್‌ಆರ್(ರೌದ್ರ–ರಣ–ರುಧಿರ) ಬಿಡುಗಡೆಯನ್ನು ಚಿತ್ರತಂಡವು ಮುಂದೂಡಿದೆ.
ಕೋವಿಡ್ ಹಾಗೂ ಕೊರೊನಾ ವೈರಾಣುವಿನ ರೂಪಾಂತರಿ ಓಮೈಕ್ರಾನ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ ಹೇರಲಾಗಿದೆ.
‘ಕೆಲ ರಾಜ್ಯಗಳು ಚಿತ್ರಮಂದಿರಗಳನ್ನು ಮುಚ್ಚುವುದು ಸೇರಿದಂತೆ ಕಠಿಣ ನಿರ್ಬಂಧಗಳ ಜೊತೆಗೆ ಲಾಕ್‌ಡೌನ್ ಹೇರಿಕೆಯ ಚಿಂತನೆಯನ್ನೂ ನಡೆಸಿವೆ. ಈ ಕಾರಣದಿಂದಾಗಿ ಅನಿವಾರ್ಯವಾಗಿ ಜನವರಿ 7ರಂದು ಬಿಡುಗಡೆಯಾಗಬೇಕಿದ್ದ ಚಿತ್ರವನ್ನು ಮುಂದೂಡಲಾಗಿದೆ’ ಎಂದು ಚಿತ್ರತಂಡವು ಹೇಳಿದೆ.
ಜ.2ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಪ್ರಿರಿಲೀಸ್ ಕಾರ್ಯಕ್ರಮ ನಡೆಸಲು ಚಿತ್ರತಂಡವು ನಿರ್ಧರಿಸಿತ್ತು.ಜ್ಯೂನಿಯರ್ ಎನ್‌ಟಿಆರ್, ರಾಮ್‌ಚರಣ್ ತೇಜ, ಅಜಯ್ ದೇವ್‌ಗನ್, ಆಲಿಯಾ ಭಟ್ ಸೇರಿದಂತೆ ಇಡೀ ಚಿತ್ರತಂಡವೇ ಬೆಂಗಳೂರಿಗೆ ಆಗಮಿಸಲು ಸಿದ್ಧತೆಯಾಗಿತ್ತು. ಚಿತ್ರ ಬಿಡುಗಡೆ ಮುಂದೂಡಿರುವ ಕಾರಣದಿಂದಾಗಿ ಈ ಕಾರ್ಯಕ್ರಮವನ್ನೂ ರದ್ದುಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.