ಮುಂಬೈ: ಪ್ರಭಾಸ್ ಹಾಗೂ ಪೃಥ್ವಿರಾಜ ಸುಕುಮಾರನ್ ಮುಖ್ಯ ಪಾತ್ರದಲ್ಲಿರುವ, ಪ್ರಶಾಂತ್ ನೀಲ್ ನಿರ್ದೇಶನದ 'ಸಲಾರ್' ಒಟಿಟಿಗೆ ಬರಲು ಸಿದ್ಧವಾಗಿದೆ. ನಾಳೆ (ಜ.20) Salaar: Part 1 - Ceasefire ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗುತ್ತಿದೆ.
ಫ್ಯಾನ್ ಇಂಡಿಯಾ ಚಿತ್ರ ಸಲಾರ್ ಚಿತ್ರ, ಗಲ್ಲಾಪೆಟ್ಟಿಗೆಯಲ್ಲಿ ₹400 ಕೋಟಿಗೂ ಹೆಚ್ಚು ಗಳಿಕೆ ಮಾಡಿದೆ. ಇದೀಗ ತೆಲುಗು, ಕನ್ನಡ. ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ಒಟಿಟಿಯಲ್ಲಿ ತೆರೆ ಕಾಣುತ್ತಿದೆ. ಆದರೆ ಹಿಂದಿ ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗುವ ದಿನಾಂಕವನ್ನು ಘೋಷಣೆ ಮಾಡಿಲ್ಲ.
ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ತಾಂತ್ರಿಕವಾಗಿ ‘ಕೆಜಿಎಫ್’ ತಂಡವೇ ಇದೆ. ರವಿ ಬಸ್ರೂರು ಸಂಗೀತ, ಭುವನ್ ಗೌಡ ಛಾಯಾಗ್ರಹಣ ಚಿತ್ರಕ್ಕಿದೆ.
ಈ ಚಿತ್ರಕ್ಕೆ ಸೆನ್ಸಾರ್ ಬೋರ್ಡ್ ‘A’ (ವಯಸ್ಕರಿಗೆ ಮಾತ್ರ) ಪ್ರಮಾಣ ಪತ್ರ ನೀಡಿದೆ.
ಖಾನ್‌ಸಾರ್ ಎಂಬ ಕಾಲ್ಪನಿಕ ಪ್ರದೇಶದ ಕಥೆ ಹಿಂಸಾತ್ಮಕವಾಗಿ ಕೂಡಿದ್ದರೂ ಇಲ್ಲಿ ದೇವ ಮತ್ತು ವರದ ಎಂಬ ಇಬ್ಬರು ಸ್ನೇಹಿತರ ನಡುವಿನ ಕಥೆಯನ್ನು ಎತ್ತಿ ತೋರಿಸಲಾಗಿದೆ.
ದೇವ ಪಾತ್ರದಲ್ಲಿ ಪ್ರಭಾಸ್ ಕಾಣಿಸಿಕೊಂಡಿದ್ದರೆ, ವರದ ಪಾತ್ರದಲ್ಲಿ ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ನಟಿಸಿದ್ದಾರೆ. ಶ್ರುತಿ ಹಾಸನ್, ಜಗಪತಿ ಬಾಬು, ಈಶ್ವರಿ ರಾವ್ ಹಾಗೂ ಶ್ರೀಯಾ ರೆಡ್ಡಿ ತಾರಾಗಣದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.