ADVERTISEMENT

ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ| ₹5 ಕೋಟಿ ಬೇಡಿಕೆ: ತರಕಾರಿ ಮಾರುವ ಯುವಕನ ಬಂಧನ

ಪಿಟಿಐ
Published 24 ಅಕ್ಟೋಬರ್ 2024, 4:47 IST
Last Updated 24 ಅಕ್ಟೋಬರ್ 2024, 4:47 IST
ಸಲ್ಮಾನ್‌ ಖಾನ್‌
ಸಲ್ಮಾನ್‌ ಖಾನ್‌   

ಮುಂಬೈ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಜಾರ್ಖಂಡ್‌ನ ಜೆಮ್‌ಶೆಡ್‌ಪುರ ಮೂಲದ ತರಕಾರಿ ಮಾರಾಟಗಾರ ಶೇಖ್‌ ಹುಸೇನ್‌ ಮೌಸಿನ್‌(24) ಎಂದು ಗುರುತಿಸಲಾಗಿದೆ.

ನಗರ ಸಂಚಾರ ನಿಯಂತ್ರಣ ಕೊಠಡಿಯ ವಾಟ್ಸ್‌ಆ್ಯಪ್‌ ಸಹಾಯವಾಣಿಗೆ ಕಳೆದ ವಾರ ₹5 ಕೋಟಿ ಬೇಡಿಕೆಯ ಬೆದರಿಕೆ ಸಂದೇಶ ಬಂದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಅನೇಕ ತಂಡಗಳಾಗಿ ವಿವಿಧ ರಾಜ್ಯಗಳಲ್ಲೂ ಶೋಧ ಕಾರ್ಯಾಚರಣೆ ನಡೆಸಿದ್ದರು.

ADVERTISEMENT

ಸಂಚಾರ ಪೊಲೀಸರ ವಾಟ್ಸ್‌ಆ್ಯಪ್‌ ಸಹಾಯವಾಣಿಗೆ ಸೋಮವಾರ ಕ್ಷಮೆಯಾಚನೆಯ ಸಂದೇಶ ಬಂದಿದೆ. ಬೆದರಿಕೆ ಸಂದೇಶ ಕಳುಹಿಸಿದ್ದ ಮೊಬೈಲ್‌ ಫೋನ್‌ ಸಂಖ್ಯೆಯಿಂದಲೇ ಕ್ಷಮೆಯಾಚನೆಯ ಸಂದೇಶ ಬಂದಿದೆ ಎಂದು ಪೊಲೀಸರು ತಿಳಿಸಿದ್ದರು.

ಸಲ್ಮಾನ್ ಖಾನ್‌ ಫಾರ್ಮ್‌ ಹೌಸ್‌ ಮೇಲೆ ದಾಳಿ ನಡೆಸಿದ್ದ ತಂಡದ ಶಾರ್ಪ್‌ ಶೂಟರ್‌ವೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಬಂಧಿತನನ್ನು ಹರಿಯಾಣ ಮೂಲದ ಸುಖ್ಬೀರ್‌ ಸಿಂಗ್‌ ಎಂದು ಗುರುತಿಸಲಾಗಿತ್ತು.

ಸಲ್ಮಾನ್‌ ಖಾನ್‌ಗೆ ಈ ಹಿಂದೆ ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌ನಿಂದ ಬೆದರಿಕೆ ಸಂದೇಶಗಳು ಬಂದಿದ್ದವು. ಸಲ್ಮಾನ್‌ ಖಾನ್‌ ಮತ್ತು ಅವರ ತಂದೆ ಸಲೀಮ್‌ ಖಾನ್‌ ಮೇಲೆ ಬಿಷ್ಣೋಯಿ ಗ್ಯಾಂಗ್‌ ಕಣ್ಣಿಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.