ADVERTISEMENT

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಭಿ –ಅವಿವಾ, ರಜನಿಕಾಂತ್, ಕುಂಬ್ಳೆ ಸೇರಿ ಗಣ್ಯರು ಸಾಕ್ಷಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಜೂನ್ 2023, 5:55 IST
Last Updated 5 ಜೂನ್ 2023, 5:55 IST
ಅಭಿಷೇಕ್‌ ಅಂಬರೀಶ್‌ ಅವರು ಅವಿವಾ ಬಿದ್ದಪ್ಪ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಅಭಿಷೇಕ್‌ ಅಂಬರೀಶ್‌ ಅವರು ಅವಿವಾ ಬಿದ್ದಪ್ಪ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.    

ಬೆಂಗಳೂರು: ಜ್ಯೂನಿಯರ್‌ ರೆಬಲ್‌ ಸ್ಟಾರ್‌ ಅಭಿಷೇಕ್‌ ಅಂಬರೀಶ್‌ ಅವರು ಅವಿವಾ ಬಿದ್ದಪ್ಪ ಅವರೊಂದಿಗೆ ಇಂದು (ಸೋಮವಾರ) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಒಕ್ಕಲಿಗ ಸಂಪ್ರದಾಯದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಅವಿವಾಗೆ ಮಾಂಗಲ್ಯ ಧಾರಣೆ ಮಾಡುವ ಮೂಲಕ ಅಭಿಷೇಕ್‌ ದೀರ್ಘಕಾಲದ ಗೆಳತಿಯೊಂದಿಗೆ ಹಸೆಮಣೆ ಏರಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಸೂಪರ್ ಸ್ಟಾರ್ ರಜನಿಕಾಂತ್, ತೆಲುಗು ನಟ ಮೋಹನ್ ಬಾಬು, ಕ್ರಿಕೆಟಿಗ ಅನಿಲ್ ಕುಂಬ್ಳೆ ಸೇರಿದಂತೆ ಹಲವು ಗಣ್ಯರು ಆಗಮಿಸಿ ನವ ದಂಪತಿಗೆ ಶುಭ ಹಾರೈಸಿದ್ದಾರೆ.

ADVERTISEMENT

ಇಂದಿನ ಸಮಾರಂಭದಲ್ಲಿ ಸ್ನೇಹಿತರು ಮತ್ತು ಕುಟುಂಬದ ಆಪ್ತರು ಮಾತ್ರ ಭಾಗವಹಿಸಿದ್ದರು.

ಜೂನ್ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದ್ದು, ಚಿತ್ರರಂಗದ ಗಣ್ಯರು ಸೇರಿದಂತೆ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ.

ಸದ್ಯ ಸೂರಿ ಅವರ ನಿರ್ದೇಶನದ ‘ಬ್ಯಾಡ್ ಮ್ಯಾನರ್ಸ್’ ಚಿತ್ರದಲ್ಲಿ ಅಭಿಷೇಕ್ ಅಭಿನಯಿಸುತ್ತಿದ್ದಾರೆ. ಅಭಿಷೇಕ್‌ಗೆ ರಚಿತಾ ರಾಮ್ ಮತ್ತು ಪ್ರಿಯಾಂಕ ನಾಯಕಿಯರಾಗಿ ನಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.