ADVERTISEMENT

ಸುದೀಪ್ –ಪ್ರಿಯಾ ದಾಂಪತ್ಯಕ್ಕೆ 20 ವರ್ಷ: ಅಭಿಮಾನಿಗಳಿಂದ ಶುಭ ಹಾರೈಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಅಕ್ಟೋಬರ್ 2021, 6:31 IST
Last Updated 19 ಅಕ್ಟೋಬರ್ 2021, 6:31 IST
ಕಿಚ್ಚ ಸುದೀಪ್ ಮತ್ತು ಪ್ರಿಯಾ (ಟ್ವಿಟರ್ ಚಿತ್ರ)
ಕಿಚ್ಚ ಸುದೀಪ್ ಮತ್ತು ಪ್ರಿಯಾ (ಟ್ವಿಟರ್ ಚಿತ್ರ)    

ಬೆಂಗಳೂರು: ಚಿತ್ರನಟ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ದಂಪತಿ 20ನೇ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ. ಇತ್ತ ಅವರ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಶುಭ ಹಾರೈಸಿದ್ದಾರೆ.

ಸುದೀಪ್‌ –ಪ್ರಿಯಾ 2001ರ ಅಕ್ಟೋಬರ್ 18ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ದಂಪತಿಗೆ 17 ವರ್ಷದ (ಸಾನ್ವಿ) ಮಗಳಿದ್ದಾಳೆ. ಇದೀಗ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 20 ವರ್ಷ ಕಳೆದಿದ್ದು, ಈ ಹಿನ್ನೆಲೆ ಸಾನ್ವಿ ಸೇರಿದಂತೆ ಅಭಿಮಾನಿಗಳು ಸುದೀಪ್‌ ದಂಪತಿಗೆ ಶುಭ ಕೋರಿದ್ದಾರೆ.

ಈ ಬಾರಿ ಕೊರೊನಾ ಕಾರಣದಿಂದಾಗಿ ಸುದೀಪ್‌ ದಂಪತಿ ವಿವಾಹ ವಾರ್ಷಿಕೋತ್ಸವವನ್ನು ಸರಳವಾಗಿ ಆಚರಿಸಿಕೊಂಡಿದ್ದು, ಇದೀಗ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.