ಬೆಂಗಳೂರು: ನಟ ರಾಕಿಂಗ್ ಸ್ಟಾರ್ ಯಶ್ ಅವರು ಸಿನಿಮಾ ಚಿತ್ರೀಕರಣದಿಂದ ಕೊಂಚ ಬಿಡುವು ಪಡೆದಿದ್ದು, ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ.
ಸದ್ಯ ವೀಕೆಂಡ್ ಮೂಡ್‌ನಲ್ಲಿರುವ ಯಶ್, ಮಗಳು ಐರಾಗೆ ಸ್ಪೆಷಲ್ ಕ್ಲಾಸ್ ಕೇಳಿಕೊಡುತ್ತಿರುವ ವಿಡಿಯೊವನ್ನು ಅವರ ಪತ್ನಿ ರಾಧಿಕಾ ಪಂಡಿತ್ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, ಸಖತ್ ವೈರಲ್ ಆಗಿದೆ.
ಯಶ್ ಅವರು ಐರಾಳಿಗೆ ಕನ್ನಡ ವರ್ಣಮಾಲೆ ಹೇಳಿಕೊಡುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. ಈ ವಿಡಿಯೊ ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ 4.24 ಲಕ್ಷ ಮಂದಿ ಇಷ್ಟಪಟ್ಟಿದ್ದಾರೆ. ವಿಡಿಯೊ ನೋಡಿ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜತೆಗೆ, ಐರಾ ಕ್ಯೂಟ್ ಆಗಿದ್ದಾಳೆ, ಐರಾಳನ್ನು ವಿದ್ಯಾರ್ಥಿನಿಯಾಗಿ ನೋಡಲು ಖುಷಿಯಾಗುತ್ತಿದೆ ಎಂದು ಬಗೆಬಗೆಯ ಕಾಮೆಂಟ್ ಮಾಡಿದ್ದಾರೆ.
ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಯಶ್– ರಾಧಿಕಾ ದಂಪತಿ ತಮ್ಮ ಅಭಿಮಾನಿಗಳಿಗಾಗಿ ಫೋಟೊ, ವಿಡಿಯೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
ಯಶ್ ಅಭಿನಯ ಮತ್ತು ಪ್ರಶಾಂತ್ ನೀಲ್ ನಿರ್ದೇಶನದ ಬಹುನಿರೀಕ್ಷಿತ ‘ಕೆಜಿಎಫ್: ಚಾಪ್ಟರ್ –2’ ಸಿನಿಮಾದ ಬಿಡುಗಡೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.