ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಜಗದೀಶ್ ಅವರು ತುಂಬು ಗರ್ಭಿಣಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಅವರು ಬೇಬಿ ಬಂಪ್ ಫೋಟೊಶೂಟ್ ಮಾಡಿಸಿದ್ದು, ಇದೀಗ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ತುಂಬು ಗರ್ಭಿಣಿಯಾಗಿರುವ ಅವರು ಪತಿ ಜಗದೀಶ್ ಜೊತೆಗೆ ಫೋಟೊಶೂಟ್ ಮಾಡಿಸಿದ್ದು, ಈ ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹೃದಯದ ಎಮೋಜಿಯೊಂದಿಗೆ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಸೇರಿದಂತೆ ಚಿತ್ರರಂಗದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.
ಕೆಲ ದಿನಗಳ ಹಿಂದೆ ತಾವು ತಾಯಿಯಾಗುತ್ತಿರುವುದಾಗಿ ಅಮೂಲ್ಯ ಹೇಳಿದ್ದರು. ಪತಿ ಜಗದೀಶ್ ಜೊತೆ ಇರುವ ಒಂದು ವಿಶೇಷ ಫೋಟೋವನ್ನು ಹಂಚಿಕೊಂಡಿದ್ದ ಅವರು 'ನಾವೀಗ ಇಬ್ಬರೇ ಅಲ್ಲ' 2022ರಲ್ಲಿ ಮೂವರಾಗುತ್ತಿದ್ದೇವೆ ಎಂದು ಬರೆದುಕೊಂಡಿದ್ದರು.
ಅಮೂಲ್ಯ ಸ್ಯಾಂಡಲ್‍ವುಡ್‍ಗೆ ಬಾಲನಟಿಯಾಗಿ ಪದಾರ್ಪಣೆ ಮಾಡಿದರು. ಬಳಿಕ ‘ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ನಟಿಯಾಗಿ ಮಿಂಚಿದರು.ಅಮೂಲ್ಯ 2017ರಲ್ಲಿ ಜಗದೀಶ್ ಅವರನ್ನು ಮದುವೆಯಾದರು.
ಇದನ್ನೂ ಓದಿ... ಸಂಕ್ರಾಂತಿ ಸಡಗರ: ನಟ ಉಪೇಂದ್ರ ಮನೆಯಲ್ಲಿ ಸಂಭ್ರಮದಿಂದ ಆಚರಣೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.