ADVERTISEMENT

ನಿಮ್ಮನ್ನು ನೀವು ಎಷ್ಟು ಪ್ರೀತಿಸುತ್ತೀರೋ ಅಷ್ಟು ಸುಂದರವಾಗುತ್ತೀರಿ: ರಾಧಿಕಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಮೇ 2022, 9:35 IST
Last Updated 14 ಮೇ 2022, 9:35 IST
ರಾಧಿಕಾ ಪಂಡಿತ್
ರಾಧಿಕಾ ಪಂಡಿತ್    

ಬೆಂಗಳೂರು: ನಟಿ ರಾಧಿಕಾ ಪಂಡಿತ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೊವನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸದ್ಯ ನಟನೆಯಿಂದ ದೂರ ಉಳಿದಿರುವ ರಾಧಿಕಾ, ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದು, ಮಕ್ಕಳಾದ ಐರಾ ಮತ್ತು ಯಥರ್ವ್‌ ಜೊತೆ ಬ್ಯುಸಿ ಆಗಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ರಾಧಿಕಾ, ಯಶ್‌ ಮತ್ತು ಮಕ್ಕಳ ಜೊತೆಗಿನ ಫೋಟೊಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಳ್ಳುತ್ತಿರುತ್ತಾರೆ.

ADVERTISEMENT

ಇದೀಗ ಇನ್‌ಸ್ಟಾಗ್ರಾಮ್‌ನಲ್ಲಿ ಹೊಸ ಫೋಟೊ ಹಂಚಿಕೊಂಡಿರುವ ಅವರು, ‘ನಿಮ್ಮನ್ನು ನೀವು ಎಷ್ಟು ಪ್ರೀತಿಸುತ್ತೀರೋ ಅಷ್ಟು ಸುಂದರವಾಗುತ್ತೀರಿ. ಎಲ್ಲರಿಗೂ ವಾರಾಂತ್ಯದ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.

2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮೀ ಪುರಾಣ’ ಚಿತ್ರದಲ್ಲಿ ರಾಧಿಕಾ ನಟಿಸಿದ್ದರು. ಇದಾದ ನಂತರದಲ್ಲಿ ಅವರು ಯಾವುದೇ ಚಿತ್ರ ಒಪ್ಪಿಕೊಂಡಿಲ್ಲ.

ಇವನ್ನೂ ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.