ಬೆಂಗಳೂರು: ಸ್ಯಾಂಡಲ್‌ವುಡ್ ಯುವ ನಟ, 'ದಿಯಾ' ಖ್ಯಾತಿಯ ಪೃಥ್ವಿ ಅಂಬಾರ್ ಅವರ ತಾಯಿ ಸುಜಾತ ವೀರಪ್ಪ ಅಂಬಾರ್ ಅವರು ಶನಿವಾರ ನಿಧನರಾಗಿದ್ದಾರೆ.
ಸುಜಾತ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಮಂಗಳೂರಿನಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇತ್ತೀಚೆಗಷ್ಟೇ ತೆರೆಕಂಡ ‘ಬೈರಾಗಿ’, ‘ಶುಗರ್ ಲೆಸ್’ ಸಿನಿಮಾಗಳಲ್ಲಿ ಪೃಥ್ವಿ ಅಂಬಾರ್ ನಟಿಸಿದ್ದಾರೆ.
2020ರಲ್ಲಿ ತೆರೆಕಂಡ ‘ದಿಯಾ’ ಸಿನಿಮಾ ಪೃಥ್ವಿ ಅಂಬಾರ್‌ಗೆ ಹೆಸರು ತಂದುಕೊಟ್ಟಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.