ಸ್ಯಾಂಡಲ್‌ವುಡ್‌ನ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಘೋಸ್ಟ್’ ಇದೇ ದಸರಾಗೆ ರಿಲೀಸ್ ಆಗಲಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ತೊಡಗಿಸಿಕೊಂಡಿದ್ದು, ಡಬ್ಬಿಂಗ್ ನಡೆಯುತ್ತಿದೆ.
ಮಲಯಾಳಂನ ಖ್ಯಾತ ನಟ ಜಯರಾಮ್ ‘ಘೋಸ್ಟ್’ ಸಿನಿಮಾ ಮೂಲಕ ಚಂದನವನಕ್ಕೆ ಹೆಜ್ಜೆ ಇಟ್ಟಿದ್ದು, ತಮ್ಮ ಪಾತ್ರಕ್ಕೆ ಕನ್ನಡದಲ್ಲೇ ಡಬ್ಬಿಂಗ್ ಮಾಡಿದ್ದಾರೆ. ಇದರ ವಿಡಿಯೊ ತುಣುಕೊಂದನ್ನು ಚಿತ್ರದ ನಿರ್ದೇಶಕ ಶ್ರೀನಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್ ಮಾಡಿದ್ದಾರೆ.
ಈ ವರ್ಷ ತೆರೆಕಾಣುತ್ತಿರುವ ಶಿವರಾಜ್‌ಕುಮಾರ್ ಅವರ ಮೊದಲ ಸಿನಿಮಾ ‘ಘೋಸ್ಟ್’. ಹೀಗಾಗಿ ಚಿತ್ರದ ಮೇಲೆ ಪ್ರೇಕ್ಷಕರಿಗೆ, ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಿದೆ. ‘ಚಿತ್ರವು ವೆಸ್ಟರ್ನ್ ಸ್ಟೈಲ್‌ನಲ್ಲಿ ಇದ್ದು, ಸ್ಕ್ರೀನ್‌ಪ್ಲೇಯಲ್ಲಿ ವೇಗವಿದೆ. ಸಿನಿಮಾದಲ್ಲಿ ಮೂರ್ನಾಲ್ಕು ಶೇಡ್ಸ್‌ನಲ್ಲಿ ನಾನು ಕಾಣಿಸಿಕೊಳ್ಳಲಿದ್ದು, ಇದೊಂದು ಸೈಕಾಲಾಜಿಕಲ್ ಥ್ರಿಲ್ಲರ್’ ಎಂದು ಬಿಗ್‌ಡ್ಯಾಡಿ ಟೀಸರ್ ಬಿಡುಗಡೆ ವೇಳೆ ಶಿವರಾಜ್‌ಕುಮಾರ್ ಹೇಳಿದ್ದರು.
‘ಬೀರ್ ಬಲ್’, ‘ಓಲ್ಡ್ ಮಾಂಕ್’ ಸಿನಿಮಾ ಖ್ಯಾತಿಯ ನಟ ಶ್ರೀನಿ ಆ್ಯಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾ, ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾವಾಗಿ ರಿಲೀಸ್ ಆಗಲಿದೆ. ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ಎನ್. ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜಯರಾಮ್ ಅವರಷ್ಟೇ ಅಲ್ಲ ಬಾಲಿವುಡ್ ನಟ ಅನುಪಮ್ ಖೇರ್, ಪ್ರಶಾಂತ್ ನಾರಾಯಣನ್ ಅವರೂ ಈ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಹೆಜ್ಜೆ ಇಡುತ್ತಿದ್ದಾರೆ. ಇದು ಶ್ರೀನಿ ನಿರ್ದೇಶನದ ಐದನೇ ಚಿತ್ರ. ಅವರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಸತ್ಯಪ್ರಕಾಶ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.