ಬೆಂಗಳೂರು: ನಗರದ ಮಾಗಡಿ ರಸ್ತೆ ಪ್ರದೇಶದಲ್ಲಿ ಸಿನಿಮಾ ಶೂಟಿಂಗ್ ವೇಳೆ ನಡೆದ ಬಾಂಬ್ ಸಿಡಿತದಿಂದ ನಟ ಸಂಜಯ್ ದತ್ ಅವರಿಗೆ ಗಾಯಗಳಾಗಿವೆ.
ಪ್ರೇಮ್ ನಿರ್ದೇಶನದ ದ್ರುವ ಸರ್ಜಾ ನಾಯಕ ನಟನೆಯ ಕೆಡಿ ಚಿತ್ರದ ಚಿತ್ರೀಕರಣದ ವೇಳೆ ಈ ಅವಘಡ ಸಂಭವಿಸಿದೆ. ದತ್ ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ದತ್ ಅವರ ಮುಖ, ಮೊಣಕೈಗೆ ಗಾಯಗಳಾಗಿವೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.
ಈ ಬಗ್ಗೆ ಮಾಹಿತಿಗೆ ಚಿತ್ರ ತಂಡದವರು ಸಂಪರ್ಕಕ್ಕೆ ಸಿಗಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.