ADVERTISEMENT

‘ಹಮಾರೆ ಬಾರಹ್’ ಚಿತ್ರ ಬಿಡುಗಡೆಗೆ ಸುಪ್ರೀಂ ಕೋರ್ಟ್‌ ತಡೆ

ಪಿಟಿಐ
Published 13 ಜೂನ್ 2024, 8:04 IST
Last Updated 13 ಜೂನ್ 2024, 8:04 IST
<div class="paragraphs"><p>ಹಮಾರೆ ಬಾರಹ್</p></div>

ಹಮಾರೆ ಬಾರಹ್

   

ನವದೆಹಲಿ: ಇಸ್ಲಾಮಿಕ್ ನಂಬಿಕೆ ಮತ್ತು ವಿವಾಹಿತ ಮುಸ್ಲಿಂ ಮಹಿಳೆಯರನ್ನು ಚಿತ್ರದಲ್ಲಿ ಅವಹೇಳನಕಾರಿಯಾಗಿ ತೋರಿಸಲಾಗಿದೆ ಎಂಬ ಆರೋಪಗಳನ್ನು ಗಮನಿಸಿದ ಸುಪ್ರೀಂ ಕೋರ್ಟ್, ಜೂನ್ 14ರಂದು ಬಿಡುಗಡೆಗೆ ಸಜ್ಜಾಗಿದ್ದ 'ಹಮಾರೆ ಬಾರಹ್' ಚಿತ್ರ ಬಿಡುಗಡೆಗೆ ತಡೆ ನೀಡಿದೆ.

ಅರ್ಜಿದಾರರ ಪರ ವಕೀಲ ಫೌಜಿಯಾ ಶಕೀಲ್ ಅವರ ವಾದವನ್ನು ಆಲಿಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ರಜಾಕಾಲದ ಪೀಠ, ಅರ್ಜಿಯ ಕುರಿತು ತ್ವರಿತ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಬಾಂಬೆ ಹೈಕೋರ್ಟ್‌ಗೆ ಸೂಚಿಸಿದೆ.

ADVERTISEMENT

‘ಬೆಳಿಗ್ಗೆ ಚಿತ್ರದ ಟ್ರೇಲರ್ ಅನ್ನು ನೋಡಿದ್ದು, ಟ್ರೇಲರ್‌ನಲ್ಲಿ ಎಲ್ಲಾ ಆಕ್ಷೇಪಾರ್ಹ ಸಂಭಾಷೆಗಳನ್ನು ಹಾಗೆ ಮುಂದುವರಿಸಲಾಗಿದೆ’ ಎಂದು ಪೀಠವು ಈ ವೇಳೆ ತಿಳಿಸಿದೆ.

ಬಾಂಬೆ ಹೈಕೋರ್ಟ್‌ನಿಂದ ಅರ್ಜಿ ಇತ್ಯರ್ಥವಾಗುವವರೆಗೆ ಚಿತ್ರದ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಪೀಠ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.