ADVERTISEMENT

ಬಿಸಿಲಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಶಾರುಕ್ ಖಾನ್ ಚೇತರಿಕೆ

ಪಿಟಿಐ
Published 23 ಮೇ 2024, 11:22 IST
Last Updated 23 ಮೇ 2024, 11:22 IST
<div class="paragraphs"><p>ಶಾರುಕ್ ಖಾನ್ </p></div>

ಶಾರುಕ್ ಖಾನ್

   

-ಪಿಟಿಐ ಚಿತ್ರ

ಮುಂಬೈ: ಬಿಸಿಲಾಘಾತದಿಂದ ಅಹಮದಾಬಾದ್‌ನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್ ನಟ ಶಾರುಕ್ ಖಾನ್ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರ ವ್ಯವಸ್ಥಾಪಕಿ ಪೂಜಾ ದದ್ಲಾನಿ ತಿಳಿಸಿದ್ದಾರೆ.

ADVERTISEMENT

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ಸನ್‌ರೈಸರ್ಸ್‌ ಹೈದರಾಬಾದ್ ನಡುವೆ ನಡೆದ ಪಂದ್ಯ ವೀಕ್ಷಿಸಿದ್ದರು. ಇದಾದ ಬಳಿಕ ಅವರು ಬಿಸಿಲಾಘಾತಕ್ಕೆ ತುತ್ತಾಗಿದ್ದರು.

‘ಶಾರುಕ್ ಖಾನ್ ಅವರ ಎಲ್ಲಾ ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ– ಅವರು ಚೇತರಿಸಿಕೊಳ್ಳುತ್ತಿದ್ದಾರೆ. ನಿಮ್ಮ ಪ್ರೀತಿ, ಪ್ರಾರ್ಥನೆ ಹಾಗೂ ಕಾಳಜಿಗೆ ಧನ್ಯವಾದಗಳು’ ಎಂದು ದದ್ಲಾನಿ ಇನ್‌ಸ್ಟಾಗ್ರಾಮ್ ‍ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.

ಅಹಮದಾಬಾದ್‌ನಲ್ಲಿ ಮಂಗಳವಾರ 45.2 ಡಿಗ್ರಿ ಸೆಲ್ಸಿಯನ್ ಉಷ್ಣಾಂಶ ದಾಖಲಾಗಿತ್ತು. ಬುಧವಾರ ಅದು 45.9 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.