ಮುಂಬೈ: ಬಾಲಿವುಡ್ ಖ್ಯಾತ ಗಾಯಕ ರಾಹುಲ್ ಜೈನ್ ವಿರುದ್ಧ ಅತ್ಯಾಚಾರದ ದೂರು ದಾಖಲಾಗಿದೆ ಎಂದು ಮಹಾರಾಷ್ಟ್ರಪೊಲೀಸರು ಹೇಳಿದ್ದಾರೆ.
ಮಹಿಳೆಯೊಬ್ಬರು ಇಲ್ಲಿನ ಸ್ಥಳೀಯ ಠಾಣೆಯಲ್ಲಿದೂರು ದಾಖಲಿಸಿದ್ದಾರೆ. ಈ ದೂರು ಆಧರಿಸಿ ರಾಹುಲ್ ಜೈನ್ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ದೂರು ನೀಡಿರುವ ಮಹಿಳೆ ಕಾಸ್ಟೂಮ್ ಸ್ಟೈಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಯುವ ಸಿನಿಮಾ ವಿಮರ್ಶಕ, ವಿಡಿಯೊ ಜಾಕಿ ಕೌಶಿಕ್ ನಿಧನ
ಕಾಸ್ಟೂಮ್ ಸ್ಟೈಲಿಸ್ಟ್ ಆಗಿರುವ ಈ ಮಹಿಳೆಯನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದಾಗಿ ರಾಹುಲ್ ಅಭಯ ನೀಡಿದ್ದರು. ಆಗಸ್ಟ್ 11ರಂದು ಈ ಬಗ್ಗೆ ಮಾತನಾಡಲು ಮಹಿಳೆಯನ್ನು ತಮ್ಮ ಫ್ಲಾಟ್ಗೆ ಕರೆಸಿಕೊಂಡಿದ್ದರು. ನಂತರ ಅವರು ನನ್ನ ಮೇಲೆ ಅತ್ಯಾಚಾರ ಮಾಡಿದರು. ರಾಹುಲ್ ಅವರು ನನ್ನ ಇನ್ಸ್ಟಾಗ್ರಾಂ ಮೂಲಕ ಪರಿಚಯ ಮಾಡಿಕೊಂಡಿದ್ದರು ಎಂದು ಮಹಿಳೆ ದೂರಿನಲ್ಲಿ ಹೇಳಿದ್ದಾರೆ.
ಈವರೆಗೂ ಪೊಲೀಸರು ರಾಹುಲ್ ಅವರನ್ನು ಬಂಧಿಸಿಲ್ಲ. ಈ ಘಟನೆಯಿಂದಾಗಿರಾಹುಲ್ಗೆ ಕಾನೂನು ಸಂಕಷ್ಟ ಎದುರಾಗಿದೆ.
ಆರೋಪ ತಳ್ಳಿ ಹಾಕಿದ ರಾಹುಲ್: ಈ ಘಟನೆ ಬಗ್ಗೆ ನನಗೆ ಏನು ಗೊತ್ತಿಲ್ಲ. ಆ ಮಹಿಳೆ ಮಾಡಿರುವ ಆರೋಪಗಳು ಸುಳ್ಳು ಎಂದು ರಾಹುಲ್ ಜೈನ್ ಸ್ಪಷ್ಟಪಡಿಸಿದ್ದಾರೆ.
ನಾನು ಯಾರನ್ನು ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಪರಿಚಯ ಮಾಡಿಕೊಂಡು ಫ್ಲಾಟ್ಗೆ ಕರೆಸಿಕೊಂಡಿಲ್ಲ. ಆ ಮಹಿಳೆ ಯಾರು ಎಂಬುದು ನನಗೆ ತಿಳಿದಿಲ್ಲ. ಆಕೆ ಮಾಡುತ್ತಿರುವ ಆರೋಪಗಳು ಸುಳ್ಳು ಮತ್ತು ಆಧಾರ ರಹಿತ ಎಂದು ರಾಹುಲ್ ಜೈನ್ ಹೇಳಿದ್ದಾರೆ.
ಈ ಹಿಂದೆ ಕೂಡ ಮಹಿಳೆಯೊಬ್ಬರು ನನ್ನ ಮೇಲೆ ಇಂತಹ ಆರೋಪ ಮಾಡಿದ್ದರು. ನಂತರ ಕೋರ್ಟ್ನಲ್ಲಿ ನನಗೆನ್ಯಾಯ ಸಿಕ್ಕಿತ್ತು ಎಂದು ರಾಹುಲ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.