ADVERTISEMENT

ನಾಳೆ ‘S/O ಮುತ್ತಣ್ಣ’ ಟೀಸರ್‌ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2024, 23:46 IST
Last Updated 21 ಅಕ್ಟೋಬರ್ 2024, 23:46 IST
ಪ್ರಣಂ ದೇವರಾಜ್‌, ರಂಗಾಯಣ ರಘು 
ಪ್ರಣಂ ದೇವರಾಜ್‌, ರಂಗಾಯಣ ರಘು    

ನಟ ದೇವರಾಜ್ ಕಿರಿಯ ಪುತ್ರ ಪ್ರಣಂ ದೇವರಾಜ್ ನಟನೆಯ ‘ಸನ್ ಆಫ್‌ ಮುತ್ತಣ್ಣ’ ಚಿತ್ರದ ಟೀಸರ್‌ ಅ.23ಕ್ಕೆ ಬಿಡುಗಡೆಯಾಗಲಿದೆ. ನಟ ಶಿವರಾಜ್‌ಕುಮಾರ್‌ ಟೀಸರ್‌ ಬಿಡುಗಡೆ ಮಾಡಲಿದ್ದಾರೆ. 

ಶ್ರೀಕಾಂತ್‌ ಹುಣಸೂರು ನಿರ್ದೇಶನದ ಈ ಚಿತ್ರದ ಆಡಿಯೊ ಹಕ್ಕುಗಳು ಈಗಾಗಲೇ ಮಾರಾಟವಾಗಿದೆ. ಸಿನಿಮಾದಲ್ಲಿ ಪ್ರಣಂ ದೇವರಾಜ್‌ ಅವರಿಗೆ ಖುಷಿ ರವಿ ನಾಯಕಿಯಾಗಿ ಜೋಡಿಯಾಗಿದ್ದಾರೆ. ರಂಗಾಯಣ ರಘು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಸುಚೇಂದ್ರ ಪ್ರಸಾದ್‌, ಗಿರೀಶ್‌ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್‌ ಪ್ರಭು, ಸುಧಾ ಬೆಳವಾಡಿ, ಅರುಣ್‌ ಚಕ್ರವರ್ತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. 

ಶೀರ್ಷಿಕೆಯೇ ಹೇಳುವಂತೆ ಇದೊಂದು ತಂದೆ-ಮಗನ ಬಾಂಧವ್ಯದ ಕಥೆಯಾಗಿದ್ದು, ಸಿನಿಮಾಗೆ ಸ್ಕೇಟ್ಟಿಂಗ್‌ ಕೃಷ್ಣ ಛಾಯಾಚಿತ್ರಗ್ರಹಣ, ಹರೀಶ್‌ ಕೊಮ್ಮೆ ಸಂಕಲನ, ಸಚಿನ್‌ ಬಸ್ರೂರ್‌ ಸಂಗೀತ ನಿರ್ದೇಶನವಿದೆ. ಯೋಗರಾಜ್ ಭಟ್, ಜಯಂತ ಕಾಯ್ಕಿಣಿ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಪುರಾತನ ಫಿಲ್ಮಂ ಹಾಗೂ ಎಸ್‌ಆರ್‌ಕೆ ಫಿಲಂಸ್ ಸಹಯೋಗದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.