ಪಹಲ್ಗಾಂ (ಜಮ್ಮು ಮತ್ತು ಕಾಶ್ಮೀರ): ಇಲ್ಲಿನ ಮಾರುಕಟ್ಟೆ ಪ್ರದೇಶದಲ್ಲಿ ಬಾಲಿವುಡ್ ನಟ ಇಮ್ರಾನ್ ಹಶ್ಮಿ ಮೇಲೆ ಅಪರಿಚಿತ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದಾರೆ.
ಈ ಸಂಬಂಧ ಪಹಲ್ಗಾಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಟ ಇಮ್ರಾನ್ ಹಶ್ಮಿ ತಮ್ಮ ಮುಂಬರುವ ‘ಗ್ರೌಂಡ್ ಜೀರೊ‘ ಸಿನಿಮಾದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಅವರು ಎರಡು ದಿನಗಳ ಹಿಂದೆಪಹಲ್ಗಾಂನಲ್ಲಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಶೂಟಿಂಗ್ ಮುಗಿಸಿಕೊಂಡು ಅವರು ಮಾರುಕಟ್ಟೆಗೆ ಬಂದಿದ್ದರು. ಈ ವೇಳೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಇಲ್ಲಿಯತನಕ ಪೊಲೀಸರು ಯಾರನ್ನು ಬಂದಿಸಿಲ್ಲ ಎಂದು ಹೇಳಿದ್ದಾರೆ. ಸಿಸಿ ಕ್ಯಾಮೆರಾ ಪರಿಶೀಲನೆ ಮಾಡುಲಾಗುತ್ತಿದ್ದು ಆರೋಪಿಗಳನ್ನು ಬಂಧಿಸುವುದಾಗಿ ಹೇಳಿದ್ದಾರೆ.
ಗ್ರೌಂಡ್ ಜೀರೊ ಸಿನಿಮಾವನ್ನು ತೇಜಸ್ ದಿಯೋಸ್ಕರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಇಮ್ರಾನ್ ಹಶ್ಮಿ ಸೇನಾಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.