ಇತ್ತೀಚೆಗಷ್ಟೆ ತನ್ನ ಬಹುಕಾಲದ ಗೆಳೆಯ ಹಾಗೂ ಸಮಾಜವಾದಿ ಪಕ್ಷದ ನಾಯಕ ಫಹದ್ ಅಹಮದ್ ಅವರನ್ನು ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಸ್ವರಾ ಭಾಸ್ಕರ್, ಇದೀಗ ಮೊದಲನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಖುಷಿ ಹಂಚಿಕೊಂಡಿರುವ ಸ್ವರಾ ಭಾಸ್ಕರ್ ತಮ್ಮ ಪತಿ ಫಹದ್ ಅವರನ್ನು ಟ್ಯಾಗ್ ಮಾಡಿದ್ದಾರೆ.
‘ಕೆಲವೊಮ್ಮೆ ನಿಮ್ಮ ಎಲ್ಲ ಪ್ರಾರ್ಥನೆಗಳಿಗೆ ಒಂದೇ ಬಾರಿ ಉತ್ತರ ಸಿಗುತ್ತದೆ. ಹೊಸ ಅಧ್ಯಯನಕ್ಕೆ ಕಾಲಿಡುವುದಕ್ಕೆ ನಾವು ಉತ್ಸುಕರಾಗಿದ್ದೇವೆ‘ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದರು.
ಇದೇ ವರ್ಷ ಫೆಬ್ರವರಿಯಲ್ಲಿ ಸ್ವರಾ ಭಾಸ್ಕರ್ ಮತ್ತು ಫಹದ್ ಅಹಮದ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಫಹದ್ ಅವರು ಸಮಾಜವಾದಿ ಪಕ್ಷದ ಯುವ ಘಟಕ ‘ಸಮಾಜವಾದಿ ಯುವಜನ ಸಭಾ‘ದ ಅಧ್ಯಕ್ಷರಾಗಿದ್ದಾರೆ. ಮುಸ್ಲಿಂ ವ್ಯಕ್ತಿಯನ್ನು ಮದುವೆಯಾದರೆಂಬ ಕಾರಣಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸ್ವರಾ ಭಾಸ್ಕರ್ ಅವರನ್ನು ಟ್ರೋಲ್ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.