2019ರಲ್ಲಿ ತೆರೆಕಂಡ ತೆಲುಗಿನ ‘ಇಸ್ಮಾರ್ಟ್ ಶಂಕರ್’ ಸಿನಿಮಾದ ಎರಡನೇ ಭಾಗ ‘ಡಬಲ್ ಇಸ್ಮಾರ್ಟ್’ ಬಿಡುಗಡೆಗೆ ಸಜ್ಜಾಗುತ್ತಿದೆ. ಚಿತ್ರತಂಡ ಇತ್ತೀಚೆಗೆ ಸಿನಿಮಾದ ಎರಡನೇ ಹಾಡನ್ನು ಬಿಡುಗಡೆ ಮಾಡಿದ್ದು, ‘ಮಾರ್ ಮುಂತಾ ಚೋಡ್ ಚಿಂತಾ’ ಎಂಬ ಹಾಡಿಗೆ ಭರ್ಜರಿಯಾಗಿ ಸ್ಟೆಪ್ ಹಾಕಿದ್ದಾರೆ ರಾಮ್ ಪೋತಿನೇನಿ ಹಾಗೂ ಕಾವ್ಯಾ ಥಾಪರ್.
ಕಾಸರ್ಲ ಶ್ಯಾಮ್ ಸಾಹಿತ್ಯದ ಈ ದೇಸಿ ನಂಬರ್‌ಗೆ ಮಣಿ ಶರ್ಮಾ ಟ್ಯೂನ್ ಹಾಕಿದ್ದು, ರಾಹುಲ್ ಸಿಪ್ಲಿಗುಂಜ್ ಮತ್ತು ಕೀರ್ತನಾ ಶರ್ಮಾ ಧ್ವನಿಯಾಗಿದ್ದಾರೆ. ‘ಇಸ್ಮಾರ್ಟ್ ಶಂಕರ್’ ಸಿನಿಮಾದ ಮುಂದುವರಿದ ಭಾಗವೇ ಈ ‘ಡಬಲ್ ಇಸ್ಮಾರ್ಟ್’ ಚಿತ್ರ. ಈ ಮೂಲಕ ನಿರ್ದೇಶಕ ಪುರಿ ಜಗನ್ನಾಥ್ ಹೊಸ ರೀತಿಯಲ್ಲಿಯೇ ಶಂಕರ್‌ನ ಕಥೆ ಹೇಳಲು ಹೊರಟ್ಟಿದ್ದಾರೆ ಎಂದಿದೆ ಚಿತ್ರತಂಡ. 2019ರಲ್ಲಿ ತೆರೆಕಂಡ ‘ಇಸ್ಮಾರ್ಟ್ ಶಂಕರ್’ ಸಿನಿಮಾದಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆ ಸಿನಿಮಾ ಕರ್ಮರ್ಷಿಯಲ್ ಹಿಟ್ ಆಗಿತ್ತು. ಈ ಸಿನಿಮಾ ಬಂದು ಐದು ವರ್ಷದ ಬಳಿಕ ಎರಡನೇ ಭಾಗ ರಿಲೀಸ್ ಆಗುತ್ತಿದೆ.
ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್ ಇಸ್ಮಾರ್ಟ್’ ಸಿನಿಮಾ ಬಿಡುಗಡೆ ಆಗಲಿದೆ. ‘ಪುರಿ ಕನೆಕ್ಟ್ಸ್’ ಬ್ಯಾನರ್ ಮೂಲಕ ಪುರಿ ಜಗನ್ನಾಥ್, ಚಾರ್ಮಿ ಕೌರ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಸಂಜಯ್ ದತ್ ಈ ಸಿನಿಮಾದಲ್ಲಿ ಖಳನಟನಾಗಿ ನಟಿಸಿದ್ದಾರೆ. ಆಗಸ್ಟ್ 15ರಂದು ಈ ಸಿನಿಮಾ ತೆರೆಕಾಣಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.