ADVERTISEMENT

'ದಿ ಕಾಶ್ಮೀರ್ ಫೈಲ್ಸ್‘: ₹200 ಕೋಟಿ ಗಳಿಸಿದ ವಿವೇಕ್ ಅಗ್ನಿಹೋತ್ರಿ ಸಿನಿಮಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಮಾರ್ಚ್ 2022, 7:48 IST
Last Updated 24 ಮಾರ್ಚ್ 2022, 7:48 IST
'ದಿ ಕಾಶ್ಮೀರ್ ಫೈಲ್ಸ್‘ ಸಿನಿಮಾ
'ದಿ ಕಾಶ್ಮೀರ್ ಫೈಲ್ಸ್‘ ಸಿನಿಮಾ   

ಬೆಂಗಳೂರು: ಮಾರ್ಚ್ 11ರಂದು ತೆರೆಕಂಡ 'ದಿ ಕಾಶ್ಮೀರ್ ಫೈಲ್ಸ್‘ ಸಿನಿಮಾ, ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಕಾಣುತ್ತಿದೆ.

ಚಿತ್ರ, ಎರಡು ವಾರಗಳಲ್ಲಿ ಜಾಗತಿಕವಾಗಿ ₹200 ಕೋಟಿ ರೂ. ಆದಾಯ ಗಳಿಸಿದೆ.

ಕಾಶ್ಮೀರಿ ಪಂಡಿತರ ಮೇಲಿನ ದೌರ್ಜನ್ಯ ಮತ್ತು ಹತ್ಯಾಕಾಂಡದ ಕುರಿತು 'ದಿ ಕಾಶ್ಮೀರ್ ಫೈಲ್ಸ್‘ ಚಿತ್ರ ತಯಾರಿಸಲಾಗಿದೆ.

ADVERTISEMENT

ವಿವೇಕ್ ಅಗ್ನಿಹೋತ್ರಿ ಅವರ ಚಿತ್ರದಲ್ಲಿ ಅನುಪಮ್ ಖೇರ್, ಪಲ್ಲವಿ ಜೋಶಿ, ಮಿಥುನ್ ಚಕ್ರವರ್ತಿ ಸಹಿತ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ.

'ದಿ ಕಾಶ್ಮೀರ್ ಫೈಲ್ಸ್‘ ಸಿನಿಮಾ ಪ್ರಭಾಸ್ ಮತ್ತು ಪೂಜಾ ಹೆಗ್ಡೆಯ ‘ರಾಧೇ ಶ್ಯಾಮ್‘ ಹಾಗೂ ಅಕ್ಷಯ್ ಕುಮಾರ್ ಅವರ ‘ಬಚ್ಚನ್ ಪಾಂಡೆ‘ ಚಿತ್ರಕ್ಕೆ ಪೈಪೋಟಿ ನೀಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.