ADVERTISEMENT

ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ 'ದಿ ಕಾಶ್ಮೀರ್ ಫೈಲ್ಸ್' ಚಿತ್ರತಂಡ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2022, 5:57 IST
Last Updated 13 ಮಾರ್ಚ್ 2022, 5:57 IST
ಪ್ರಧಾನಿ ಜೊತೆ ಚಿತ್ರತಂಡ
ಪ್ರಧಾನಿ ಜೊತೆ ಚಿತ್ರತಂಡ   

ಮುಂಬೈ: ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿರುವ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಈಬೆನ್ನಲೇಚಿತ್ರತಂಡ ಪ್ರಧಾನಿನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದೆ.

ಚಿತ್ರದ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ, ಅವರ ಪತ್ನಿ ಹಾಗೂನಟಿ ಪಲ್ಲವಿ ಜೋಶಿ, ನಿರ್ಮಾಪಕ ಅಭಿಷಕ್‌ ಅವರು ಪ್ರಧಾನಿಯವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ನರೇಂದ್ರ ಮೋದಿ ಅವರು ಚಿತ್ರತಂಡಕ್ಕೆ ಅಭಿನಂದನೆಗಳನ್ನು ಹೇಳಿದ್ದಾರೆ.

ದೇಶದಾದ್ಯಂತ ಬಿಡುಗಡೆಯಾಗಿರುವ ಈ ಬಾಲಿವುಡ್‌ಸಿನಿಮಾ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ.

ADVERTISEMENT

ಜಮ್ಮು ಮತ್ತು ಕಾಶ್ಮೀರದಲ್ಲಿನ ಕಾಶ್ಮೀರಿ ಪಂಡಿತರ ಒತ್ತಾಯದ ವಲಸೆ ಹಾಗೂ ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳು, ಅನ್ಯಾಯವನ್ನು ಬಿಂಬಿಸುವ ಕಥಾ ಹಂದರ ಹೊಂದಿದೆ.

ಈ ಚಿತ್ರ ನೈಜ ಘಟನೆಗಳನ್ನು ಆಧರಿಸಿರುವ ಸಿನಿಮಾ. ಅನ್ಯಾಯಕ್ಕೆ ಒಳಗಾದವರು ಮತ್ತು ಸಮಸ್ಯೆಗಳಿಗೆ ಸಿಲುಕಿರುವವರನ್ನು ಭೇಟಿ ಮಾಡಿ ಚಿತ್ರಕಥೆ ಬರೆಯಲಾಗಿದೆ ಎಂದು ಚಿತ್ರದ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಹೇಳಿದ್ದಾರೆ.

ಕನ್ನಡಿಗ ಪ್ರಕಾಶ್‌ ಬೆಳವಾಡಿ ಸೇರಿದಂತೆ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ, ಪುನೀತ್ ಇಸ್ಸಾರ್ ಸೇರಿದಂತೆ ಹಲವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.