ಭಕ್ತಿ ಪ್ರಧಾನ ‘ತಾರಕೇಶ್ವರ’ ಚಿತ್ರದ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್ ಹಾಡು ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.
ಪುರುಷೋತ್ತಮ್ ಓಂಕಾರ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ‘ಶಿವಪುರಾಣದಲ್ಲಿ ತಾರಕಾಸುರ ರಾಕ್ಷಸನಾದರೂ, ತಂದೆ ಕೊಂದವನ ಮೇಲೆ ಸೇಡು ತೀರಿಸಿಕೊಳ್ಳಲು ತಪ್ಪಸ್ಸು ಮಾಡಿ ತನಗೆ ಸಾವು ಬರಬಾರದೆಂದು ಬ್ರಹ್ಮನಿಂದ ವರ ಪಡೆದುಕೊಳ್ಳುತ್ತಾನೆ. ಮುಂದೆ ಯಾವ ರೀತಿ ಹೋರಾಟ ಮಾಡುತ್ತಾನೆಂದು ಕುತೂಹಲದ ಸನ್ನಿವೇಶಗಳೊಂದಿಗೆ ತೋರಿಸಲಾಗಿದೆ. ಬೆಂಗಳೂರು, ಶ್ರೀರಂಗಪಟ್ಟಣ, ಮೈಸೂರು ಮೊದಲಾದೆಡೆ ಚಿತ್ರೀಕರಣ ನಡೆಸಲಾಗಿದೆ’ ಎಂದರು ನಿರ್ದೇಶಕರು.
‘ನಾನು ಈಶ್ವರ ಪಾತ್ರ ಮಾಡಿದಾಗ ಎಲ್ಲರೂ ಇಷ್ಟಪಟ್ಟರು. ನಂತರ ‘ಗಂಗೆಗೌರಿ’ ಚಿತ್ರ ಪ್ರಾರಂಭಿಸಿದೆ. ಅದರ ಎಡಿಟಿಂಗ್ ಸಮಯದಲ್ಲಿ ಈ ಚಿತ್ರ ಮಾಡುವ ಬಗ್ಗೆ ಪ್ರಸ್ತಾಪ ಬಂತು’ ಎಂದು ಚಿತ್ರ ಪ್ರಾರಂಭದ ಕುರಿತು ಮಾಹಿತಿ ನೀಡಿದರು ನಟ, ನಿರ್ಮಾಪಕ ಗಣೇಶ್‌ರಾವ್ ಕೇಸರ್‌ಕರ್.
ಪಾರ್ವತಿಯಾಗಿ ರೂಪಾಲಿ ಕಾಣಿಸಿಕೊಂಡಿದ್ದಾರೆ. ಬಾಲನಟಿ ಋತುಸ್ಪರ್ಶ, ಸುಮಿತ ಪ್ರವೀಣ್, ಅನ್ನಪೂರ್ಣ ಮೊದಲಾದವರು ಚಿತ್ರದಲ್ಲಿದ್ದಾರೆ. ರಾಜ್‌ಭಾಸ್ಕರ್ ಸಂಗೀತ, ಮುತ್ತುರಾಜ್ ಛಾಯಾಚಿತ್ರಗ್ರಹಣ, ಅನಿಲ್‌ಕುಮಾರ್ ಸಂಕಲನವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.