ಹೈದರಾಬಾದ್: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅಭಿನಯದ ‘ಸಿಕಂದರ್’ ಚಿತ್ರದ ಶೂಟಿಂಗ್ ಸ್ಥಳದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.
ಸಲ್ಮಾನ್ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನಿಂದ ನಿರಂತರವಾಗಿ ಜೀವ ಬೆದರಿಕೆ ಸಂದೇಶಗಳು ಬಂದಿವೆ. ಈ ಹಿನ್ನೆಲೆ ಹೈದರಾಬಾದ್‌ನ ಸ್ಟಾರ್ ಹೋಟೆಲ್‌ನಲ್ಲಿ ಬಿಗಿ ಭದ್ರತೆಯ ನಡುವೆ ಶೂಟಿಂಗ್ ನಡೆಸಲಾಗುತ್ತಿದೆ.
ಸಲ್ಮಾನ್ ಖಾನ್ ಅವರು ‘ವೈ ಪ್ಲಸ್’ ವರ್ಗದ ಭದ್ರತೆ ಹೊಂದಿರುವುದರಿಂದ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ಶನಿವಾರ ತಿಳಿಸಿವೆ.
ಈ ಹಿಂದೆ ಸಲ್ಮಾನ್ ಖಾನ್ ಅವರಿಗೆ ಬಿಷ್ಣೋಯಿ ಗ್ಯಾಂಗ್‌ನಿಂದ ಹಲವು ಬಾರಿ ಬೆದರಿಕೆ ಹಾಕಲಾಗಿತ್ತು. ಗುರುವಾರ ಮತ್ತೆ ಬೆದರಿಕೆ ಹಾಕಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ಮುಂಬೈನಲ್ಲಿ ತಿಳಿಸಿದ್ದರು.
ಗುರುವಾರ ರಾತ್ರಿ ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಹಾಯವಾಣಿಗೆ ಬೆದರಿಕೆ ಸಂದೇಶ ಬಂದಿದ್ದು, ₹5 ಕೋಟಿಗೆ ಬೇಡಿಕೆಯಿಟ್ಟಿದ್ದರು. ಅಲ್ಲದೇ ಇದನ್ನು ಬಿಷ್ಣೋಯಿ ಗ್ಯಾಂಗ್ ಪರವಾಗಿ ಮಾಡಲಾಗುತ್ತಿದೆ ಎಂದೂ ಹೇಳಿದ್ದರು.
ಅಧಿಕಾರಿಗಳ ದೂರಿನ ಮೇರೆಗೆ ವರ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸಿಕಂದರ್ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಕೂಡ ನಟಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.