ಮಂಗಳೂರು: ನಿಶಾನ್ ವರುಣ್ ಮೂವೀಸ್ ಸಂಸ್ಥೆಯು ನಿರ್ಮಿಸಿದ ‘ಪೆಪ್ಪೆರೆರೆ ಪೆರೆರೆರೆ’ ಎಂಬ ತುಳು ಚಲನಚಿತ್ರವನ್ನು ಯು–ಟ್ಯೂಬ್‌ನಲ್ಲಿ ಪ್ರಸಾರ ಮಾಡಿದ್ದ ‘ತುಳು ಸೂಪರ್ ಕಾಮಿಡಿ 2.0’ ವಿರುದ್ಧ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಸುಮಾರು₹ 1 ಕೋಟಿಗೂ ಹೆಚ್ಚಿನ ಮೊತ್ತದ ವೆಚ್ಚದಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿ ಒ.ಟಿ.ಟಿ ವೇದಿಕೆಗಳಲ್ಲಿ ಪ್ರಸಾರ ಮಾಡಿದ್ದೇವೆ. ಈ ತುಳು ಚಲನಚಿತ್ರವನ್ನು ನಿಶಾನ್ ವರುಣ್ ಮೂವೀಸ್ ಸಂಸ್ಥೆಯವರ ಅನುಮತಿ ಪಡೆಯದೆಯೇ ‘ತುಳು ಸೂಪರ್ ಕಾಮಿಡಿ 2.0’ ಯ್ಯೂಟ್ಯೂಬ್ ಚಾನಲ್‌ನಲ್ಲಿ ಪ್ರಸಾರ ಮಾಡಲಾಗಿದೆ. ಇದರಿಂದ ನಷ್ಟ ಉಂಟಾಗಿದೆ‘ ಎಂದು ಚಲನಚಿತ್ರದ ನಿರ್ಮಾಣ ಮಾಡಿದ ನಿಶಾನ್ ವರುಣ್ ಮೂವೀಸ್ ಸಂಸ್ಥೆಯವರು ಪೊಲಿಸರಿಗೆ ದೂರು ನೀಡಿದ್ದಾರೆ.
‘ತುಳು ಸೂಪರ್ ಕಾಮಿಡಿ 2.0’ ಯ್ಯೂಟ್ಯೂಬ್ ಚಾನಲ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಂಸ್ಥೆಯು ಒತ್ತಾಯಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.