ADVERTISEMENT

ಡಿ. 15ಕ್ಕೆ ‘ಓ ನನ್ನ ಚೇತನ’ ‘ಯೂಸ್ ಲೆಸ್ ಫೆಲೋ’ ತೆರೆಗೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2023, 15:04 IST
Last Updated 14 ಡಿಸೆಂಬರ್ 2023, 15:04 IST
ಅಪೂರ್ವ 
ಅಪೂರ್ವ    

‘ಅಪೂರ್ವ’ ಸಿನಿಮಾ ಮೂಲಕ ಚಂದನವನಕ್ಕೆ ಹೆಜ್ಜೆ ಇಟ್ಟು ‘ವಿಕ್ಟರಿ–2’, ‘ಕೃಷ್ಣ ಟಾಕೀಸ್‌’ ಹೀಗೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಅಪೂರ್ವ ಇದೀಗ ನಿರ್ದೇಶಕಿಯಾಗಿ ಬೆಳ್ಳಿತೆರೆಯಲ್ಲಿ ಹೊಸ ಪಯಣ ಆರಂಭಿಸಿದ್ದಾರೆ. 

ಅವರ ನಿರ್ದೇಶನದ ಚೊಚ್ಚಲ ಸಿನಿಮಾ ‘ಓ ನನ್ನ ಚೇತನ’ ಇಂದು(ಡಿ.15) ತೆರೆಕಂಡಿದೆ. ಮಕ್ಕಳ ಮೇಲೆ ಮೊಬೈಲ್‌ನಿಂದ ಆಗುವ ಪರಿಣಾಮವನ್ನು ಕಥಾವಸ್ತುವನ್ನಾಗಿಟ್ಟುಕೊಂಡು ಈ ಸಿನಿಮಾ ಕಥೆ ಹೆಣೆಯಲಾಗಿದೆ. ಸಿನಿಮಾದಲ್ಲಿ ದೊಡ್ಡ ತಾರಾಬಳಗವಿಲ್ಲ. ಇದು ಇಂದಿನ ಪೀಳಿಗೆಯನ್ನು ಎಚ್ಚರಿಸುವ ಸಿನಿಮಾ ಎಂದಿದೆ ಚಿತ್ರತಂಡ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದ ಈ ಸಿನಿಮಾವನ್ನು, ಬಿ.ಜಿ ಮಲ್ಲಿಕಾರ್ಜುನ ಸ್ವಾಮಿ ಅವರು ಮೂನಿಪ್ಲಿಕ್ಸ್ ಸ್ಟುಡಿಯೋಸ್ ಮೂಲಕ ಬಿಡುಗಡೆ ಮಾಡುತ್ತಿದ್ದಾರೆ. 

‘ಅಲೆಮಾರಿ’ ಖ್ಯಾತಿಯ ಹರಿ ಸಂತು ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಪ್ರದೀಪ್ ವರ್ಮಾ ಸಂಗೀತ ಸಂಯೋಜಿಸಿದ್ದಾರೆ. ಗುರುಪ್ರಶಾಂತ್ ಛಾಯಾಚಿತ್ರಗ್ರಹಣ, ಕೆ.ಎಂ ಪ್ರಕಾಶ್ ಸಂಕಲ ಚಿತ್ರಕ್ಕಿದೆ. ಚಿತ್ರದ ಮುಖ್ಯಭೂಮಿಕೆಯಲ್ಲಿ ಮಾಸ್ಟರ್ ಪ್ರತೀಕ್, ಮಾಸ್ಟರ್ ಪ್ರೀತಮ್, ಬೇಬಿ ದಾನೇಶ್ವರಿ, ಬೇಬಿ ಡಿಂಪನಾ, ಬೇಬಿ ಮೋನಿಕಾ ನಟಿಸಿದ್ದಾರೆ. 

ADVERTISEMENT

ಯೂಸ್ ಲೆಸ್ ಫೆಲೋ

ಈ ಸಿನಿಮಾ ಮನು ಯು.ಬಿ. ಎಂಬುವವರ ನಿರ್ದೇಶನದ ಚೊಚ್ಚಲ ಸಿನಿಮಾ. ನಟನಾಗಿ ಚಂದನವನಕ್ಕೆ ಹೆಜ್ಜೆ ಇಟ್ಟ ಮನು ಅವರೇ ಈ ಚಿತ್ರದ ನಾಯಕ. ನಿರ್ದೇಶನದ ಜೊತೆ ಚಿತ್ರಕಥೆ, ಸಂಭಾಷಣೆಯನ್ನೂ ಅವರು ಬರೆದಿದ್ದಾರೆ. ಲವ್ ಕಂ ಆ್ಯಕ್ಷನ್ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ಮನುಗೆ ಜೋಡಿಯಾಗಿ ದಿವ್ಯಾ ಗೌಡ ನಟಿಸಿದ್ದು, ವಿಜಯ್ ಸೂರ್ಯ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶ್ಯಾಮ್ ಸಿಂಧನೂರು ಛಾಯಾಚಿತ್ರಗ್ರಹಣ, ವಿಜಯ್ ಸಿಂದಿಗಿ ಸಂಕಲನ, ಶಿವಪ್ರಸಾದ್ ಸಂಗೀತ ಚಿತ್ರಕ್ಕಿದೆ. 

ಮನು ಯು.ಬಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.