‘ಅಲೆಮಾರಿ’ ಚಿತ್ರದೊಂದಿಗೆ ನಿರ್ದೇಶಕನಾಗಿ ಸಿನಿ ಪಯಣ ಆರಂಭಿಸಿ ಈತನಕ ಹತ್ತು ಚಿತ್ರಗಳನ್ನು ನಿರ್ದೇಶಿಸಿರುವ ಹರಿ ಸಂತೋಷ್, ‘ಡಿಸ್ಕೊ’ ಹಾಗೂ ‘congratulations ಬ್ರದರ್’ ಚಿತ್ರಗಳನ್ನು ಘೋಷಿಸಿದ್ದಾರೆ. ಕೆ.ವಿ.ಎನ್ ಪ್ರೊಡಕ್ಷನ್ಸ್ ಮುಖ್ಯಸ್ಥರಾದ ವೆಂಕಟ್ ನಾರಾಯಣ್ ಪೋಸ್ಟರ್ ಅನಾವರಣ ಮಾಡಿ ಚಿತ್ರಗಳಿಗೆ ಚಾಲನೆ ನೀಡಿದರು.
‘ಡಿಸ್ಕೋ’ ನಾಯಕನ ಅಡ್ಡ ಹೆಸರು. ವಿಕ್ಕಿ ವರುಣ್ ಈ ಚಿತ್ರದ ನಾಯಕ. ನನ್ನ ಹಾಗೂ ವಿಕ್ಕಿ ವರಣ್ ಕಾಂಬಿನೇಶನ್ನಲ್ಲಿ ‘ಕಾಲೇಜ್ ಕುಮಾರ’ ಚಿತ್ರದ ನಂತರ ಈ ಚಿತ್ರ ಮೂಡಿಬರುತ್ತಿದೆ. ಇದೊಂದು ಹಳ್ಳಿಯಲ್ಲಿ ನಡೆಯುವ ಕಥೆ. ನಮ್ಮ ಪೆನ್ ಎನ್ ಪೇಪರ್ ಸ್ಟುಡಿಯೋಸ್ ಹಾಗೂ ಕಲ್ಲೂರ್ ಸಿನಿಮಾಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಧ್ರುವ್ ಸಂಗೀತ ನೀಡಲಿದ್ದಾರೆ’ ಎಂದು ಮಾಹಿತಿ ನೀಡಿದರು ಹರಿ ಸಂತೋಷ್.
‘congratulations ಬ್ರದರ್’ ಚಿತ್ರದ ಕಥೆ ಬರೆಯಲು ಒಂದು ವರ್ಷವಾಯಿತು. ಮಾರ್ನಿಂಗ್ ಶೋ ಆಡಿಯನ್ಸ್ ತಲೆಯಲ್ಲಿಟ್ಟಿಕೊಂಡು ಕಥೆ ಮಾಡಿದ್ದೇವೆ. ಪ್ರತಾಪ್ ಗಂಧರ್ವ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಕ್ಷಿತ್ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಸಂಜನಾ ಈ ಚಿತ್ರದ ನಾಯಕಿ. ಅನುಷಾ ಎಂಬ ಹೊಸ ಹುಡುಗಿಯನ್ನು ಪರಿಚಯಿಸುತ್ತಿದ್ದೇವೆ’ ಎಂದು ಅವರು ತಿಳಿಸಿದರು.
ಈ ಚಿತ್ರಕ್ಕೆ ಸೂರಜ್ ಜೋಯಿಸ್ ಸಂಗೀತ, ಗುರು ಛಾಯಾಚಿತ್ರಗ್ರಹಣವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.