ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೇಮಾ ಚೌಧರಿ ಅವರಿಗೆ ಮಿದುಳಿನಲ್ಲಿ ರಕ್ತ ಕಟ್ಟಿದ್ದು ಜಯನಗರದ ಅಪೊಲೊ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗುವುದು. ಇಂದು (ಬುಧವಾರ) ಸಂಜೆ ಅವರ ಪುತ್ರ ವಿದೇಶದಿಂದ ಆಗಮಿಸಲಿದ್ದಾರೆ ಎಂದು ಅವರ ಕುಟುಂಬದವರು ಹೇಳಿದ್ದಾರೆ.
ಹೇಮಾ ಚೌಧರಿ ಅವರು 70ರ ದಶಕದಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂನ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಿನಿಮಾಗಳು ಮಾತ್ರವಲ್ಲದೇ ಕನ್ನಡದ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.