ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ನಿಧನರಾದರು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಲೀಲಾವತಿ ಅವರಿಗೆ ನೆಲಮಂಗಲ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನುನೀಡಲಾಗುತ್ತಿತ್ತು. ಲೀಲಾವತಿ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದರು. ಕನ್ನಡದಲ್ಲಿ ಅಷ್ಟೇ ಅಲ್ಲ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಚಿತ್ರಗಳಲ್ಲಿ ನಟಿಸಿದ್ದರು. ಲೀಲಾವತಿಯವರ ನಿಧನಕ್ಕೆ ಇಡೀ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.