ಕೊಚ್ಚಿ: ಮಲಯಾಳಂ ಚಿತ್ರರಂಗದ ಹಿರಿಯ ನಿರ್ದೇಶಕ ಕೆ. ಜಿ ಜಾರ್ಜ್ (77) ಭಾನುವಾರ ನಿಧನರಾದರು.
ಕೆಲವು ವರ್ಷಗಳ ಹಿಂದೆ ಪಾರ್ಶ್ವವಾಯುವಿಗೆ ತುತ್ತಾಗಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ವರದಿಗಳ ಪ್ರಕಾರ ಅವರು ಕೊಚ್ಚಿಯ ಕಕ್ಕನಾಡದಲ್ಲಿನ ವೃದ್ಧಾಶ್ರಮದಲ್ಲಿ ನಿಧನರಾಗಿದ್ದಾರೆ.
ಜಾರ್ಜ್ ಅವರು 1975ರಲ್ಲಿ ಮೊದಲ ಬಾರಿ ನಿರ್ದೇಶಿಸಿದ ‘ಸ್ವಪ್ನದಾನಂ’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಅಲ್ಲದೆ ಯುವಾನಿಕಾ, ಇರಕಾಲ್ ಸೇರಿ ಹಲವು ಚಿತ್ರಗಳಿಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗೂ ಭಾಜನಾರಾಗಿದ್ದರು.
ಎರಡು ದಶಕಗಳ ಕಾಲ ಚಿತ್ರರಂಗದಲ್ಲಿ ಇದ್ದರೂ ಯುವ ನಿರ್ದೇಶಕರಿಗೆ ಮಾದರಿಯಾಗುವಂತಹ ಚಿತ್ರಗಳನ್ನು ನಿರ್ದೇಶನ ಮಾಡಿದ್ದರು.
ಜಾರ್ಜ್ ಅವರ ನಿಧನಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸಂತಾಪ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.