ADVERTISEMENT

ಗಾಯಕಿ ಲತಾ ಮಂಗೇಶ್ಕರ್ ಸ್ಥಿತಿ ಮತ್ತೆ ಗಂಭೀರ, ಐಸಿಯುನಲ್ಲಿ ನಿಗಾ: ವೈದ್ಯರ ಮಾಹಿತಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಫೆಬ್ರುವರಿ 2022, 9:22 IST
Last Updated 5 ಫೆಬ್ರುವರಿ 2022, 9:22 IST
ಲತಾ ಮಂಗೇಶ್ಕರ್
ಲತಾ ಮಂಗೇಶ್ಕರ್   

ಮುಂಬೈ: 'ಗಾನ ಕೋಗಿಲೆ' ಖ್ಯಾತಿಯ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಮತ್ತೆ ಹದೆಗೆಟ್ಟಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆ ಎಎನ್‌ಐ ಟ್ವೀಟಿಸಿದೆ.

ಲತಾ ಅವರಿಗೆ ಚಿಕಿತ್ಸೆ ಒದಗಿಸುತ್ತಿರುವ ಮುಂಬೈನ ಬೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಪ್ರತೀತ್ ಸಮ್ದಾನಿ ಈ ಕುರಿತು ಮಾಹಿತಿ ನೀಡಿದ್ದಾರೆ.

ADVERTISEMENT

'ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಮತ್ತೆ ಹದ್ದೆಗೆಟ್ಟಿದ್ದು, ಚಿಂತಾಜನಕವಾಗಿದೆ. ಅವರು ವೆಂಟಿಲೇಟರ್‌ನಲ್ಲಿದ್ದಾರೆ. ಇನ್ನೂ ಐಸಿಯುನಲ್ಲಿದ್ದು ವೈದ್ಯರು ನಿಗಾ ವಹಿಸುತ್ತಿದ್ದಾರೆ' ಎಂದು ತಿಳಿಸಿದ್ದಾರೆ.

ಜನವರಿಯಲ್ಲಿ ಕೋವಿಡ್ ದೃಢಪಟ್ಟ ಬಳಿಕ 92 ವರ್ಷದ ಲತಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜನವರಿ 30ರಂದು ಕೋವಿಡ್ ಹಾಗೂ ನ್ಯುಮೋನಿಯಾದಿಂದ ಗುಣಮುಖರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.