ಬೆಂಗಳೂರು: ‘ದಿ ಕಾಶ್ಮೀರ್ ಫೈಲ್ಸ್‘ ಸಿನಿಮಾವನ್ನು ಉಚಿತವಾಗಿ ಪ್ರದರ್ಶನ ಮಾಡುವುದನ್ನು ನಿಲ್ಲಿಸಬೇಕು ಎಂದು ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ.
ಹರಿಯಾಣ ಸಿಎಂ ಅವರನ್ನು ಉದ್ದೇಶಿಸಿ ಟ್ವೀಟ್ ಮಾಡಿರುವ ಅಗ್ನಿಹೋತ್ರಿ, ಚಿತ್ರವನ್ನು ಉಚಿತವಾಗಿ ಪ್ರದರ್ಶನ ಮಾಡುವುದನ್ನು ನಿಲ್ಲಿಸಿ. ಹಾಗೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದೆ. ರಾಜಕೀಯ ನಾಯಕರು ಉದ್ಯಮವನ್ನು ಪ್ರೋತ್ಸಾಹಿಸಬೇಕು, ಅದರ ಹೊರತು ಉಚಿತ ಟಿಕೆಟ್ ಹಂಚಬಾರದು ಎಂದು ವಿನಂತಿಸಿಕೊಂಡಿದ್ದಾರೆ.
ರಾಜಕೀಯ ನಾಯಕರು ವಿವಿಧ ಕಡೆಗಳಲ್ಲಿ ಚಿತ್ರದ ಉಚಿತ ಪ್ರದರ್ಶನ ಆಯೋಜಿಸುತ್ತಿದ್ದಾರೆ. ಉಚಿತವಾಗಿ ಸಿನಿಮಾಪ್ರದರ್ಶನ ಮಾಡುವುದು ಸರಿಯಲ್ಲ ಎಂದು ನಿರ್ದೇಶಕರು ಹೇಳಿದ್ದಾರೆ.
ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಕರ್ನಾಟಕ ಸೇರಿದಂತೆ ಉತ್ತರ ಪ್ರದೇಶ, ತ್ರಿಪುರಾ, ಗೋವಾ, ಹರಿಯಾಣ, ಗುಜರಾತ್ ಮತ್ತು ಉತ್ತರಾಖಂಡದಲ್ಲಿ ತೆರಿಗೆ ವಿನಾಯಿತಿ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.