ಕನ್ನಡದ 'ಉಲ್ಲಾಸ ಉತ್ಸಾಹ' ಚಿತ್ರದ ಮೂಲಕ ಸಿನಿ ಪಯಣ ಆರಂಭಿಸಿ, ಬಾಲಿವುಡ್’ನಲ್ಲಿ ಮಿಂಚುತ್ತಿರುವ ನಟಿ ಯಾಮಿ ಗೌತಮ್ (yami Gautam) ಅವರ ನೂತನ ಸಿನಿಮಾ ’ಎ ಥರ್ಸ್‌ಡೇ’(A Thursday) ಬಿಡುಗಡೆಗೆ ಸಿದ್ಧವಾಗಿದೆ.
ಈ ಚಿತ್ರದಲ್ಲಿ ಯಾಮಿ ಗೌತಮ್ ಶಿಕ್ಷಕಿ ಪಾತ್ರದಲ್ಲಿ ಕಾಣಿಸಿಕೊಂಡರೂಅವರು ಭಯೋತ್ಪಾದಕಿ ಪಾತ್ರದಲ್ಲಿ ಮಿಂಚಿದ್ದಾರೆ. ಅವರು ಯಾಕೆ ಭಯೋತ್ಪಾದಕಿಯಾದರು?ಅವರ ಹಿಂದೆ ಯಾರಿದ್ದಾರೆ? ಎಂಬುದನ್ನು ತಿಳಿಯಲು ಸಿನಿಮಾ ನೋಡಲೇಬೇಕು ಎಂದು ಚಿತ್ರತಂಡ ಹೇಳಿದೆ. ಈ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ.
’ಎ ಥರ್ಸ್‌ಡೇ’ ಸಿನಿಮಾ ಫೆಬ್ರುವರಿ 17ರ ಗುರುವಾರ ಬಿಡುಗಡೆಯಾಗಲಿದೆ. ಒಟಿಟಿ ವೇದಿಕೆ ’ಹಾಟ್‌ಸ್ಟಾರ್’ನಲ್ಲಿ ಜಾಗತಿಕವಾಗಿ ತೆರೆಗೆ ಬರಲಿದೆ. ಅತುಲ್ ಕುಲಕರ್ಣಿ, ಡಿಂಪಲ್ ಕಪಾಡಿಯಾ, ನೇಹಾ ದೂಪಿಯಾ ಸೇರಿದಂತೆ ಹಲವರು ನಟಿಸಿದ್ದಾರೆ.
ಕೆಲ ತಿಂಗಳ ಹಿಂದೆ ಉರಿ ಚಿತ್ರದ ನಿರ್ದೇಶಕ ಆದಿತ್ಯ ಧಾರ್ ಅವರನ್ನು ಯಾಮಿ ಗೌತಮ್ ಮದುವೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.