ಬೆಂಗಳೂರು: ಬಾಲಿವುಡ್‌ನ ಜನಪ್ರಿಯ ತಾರಾ ದಂಪತಿ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್‌ಗೆ ಕಳೆದ ಭಾನುವಾರ ಹೆಣ್ಣು ಮಗು ಜನಿಸಿದೆ.
ಮುಂಬೈನ ರಿಲಯನ್ಸ್ ಆಸ್ಪತ್ರೆಯಲ್ಲಿ ಆಲಿಯಾ ಭಟ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.
ಗುರುವಾರ ಮಗುವನ್ನು ಕರೆದುಕೊಂಡು ಆಲಿಯಾ–ರಣಬೀರ್ ದಂಪತಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ಮಗು ಜನಿಸಿರುವ ಕುರಿತು ಆಲಿಯಾ ಭಟ್ ಅವರು ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ತಿಳಿಸಿದ್ದರು.
ಮಗು ಜನಿಸಿದ ಬಳಿಕ ಬಾಲಿವುಡ್ ಸೆಲೆಬ್ರಿಟಿಗಳು, ಕಪೂರ್ ಮತ್ತು ಆಲಿಯಾ ಕುಟುಂಬದ ಆಪ್ತರು ಹಾಗೂ ಅಭಿಮಾನಿಗಳು ದಂಪತಿಗೆ ಶುಭಕೋರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.