ಬೆಂಗಳೂರು: ವಿನಯ್ ರಾಜ್‌ಕುಮಾರ್ ನಟನೆಯ ಸಿಂಪಲ್ ಸುನಿ ನಿರ್ದೇಶನದ ‘ಒಂದು ಸರಳ ಪ್ರೇಮ ಕಥೆ’ ಚಿತ್ರ ಒಟಿಟಿಗೆ ಕಾಲಿಟ್ಟಿದೆ. ಫೆ.8ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಚಿತ್ರ ಉತ್ತಮ ಪ್ರತಿಕ್ರಿಯೆ ಕಂಡಿತ್ತು.
ಅಮೇಜಾನ್ ಪ್ರೈಮ್ ಒಟಿಟಿಯಲ್ಲಿ ಚಿತ್ರ ಇಂದು ಬಿಡುಗಡೆಯಾಗಿದೆ.
ಸಿನಿಮಾದಲ್ಲಿ ವಿನಯ್ ರಾಜ್‌ಕುಮಾರ್‌ಗೆ ಸ್ವತಿಷ್ಠ ಕೃಷ್ಣನ್ ಹಾಗೂ ‘ರಾಧಾ ಕೃಷ್ಣ’ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ಜೋಡಿಯಾಗಿದ್ದಾರೆ. ನಟ ರಾಘವೇಂದ್ರ ರಾಜ್‌ಕುಮಾರ್ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಇದೇ ಮೊದಲ ಬಾರಿಗೆ ಮಲ್ಲಿಕಾ ಸಿಂಗ್ ಕನ್ನಡ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೊರೊನಾ ಸಮಯದಲ್ಲಿ ಕನ್ನಡಕ್ಕೆ ಡಬ್ ಆಗಿದ್ದ ಹಿಂದಿಯ ರಾಧಾ ಕೃಷ್ಣ ಧಾರಾವಾಹಿಯ ಮೂಲಕ ಮಲ್ಲಿಕಾ ಸಿಂಗ್ ಕನ್ನಡಿಗರಿಗೆ ಪರಿಚಿತರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.