ADVERTISEMENT

ಒಟಿಟಿ ವೇದಿಕೆಯಲ್ಲೂ ತಂಬಾಕು ವಿರೋಧಿ ಎಚ್ಚರಿಕೆ ಕಡ್ಡಾಯ: ಆರೋಗ್ಯ ಸಚಿವಾಲಯದಿಂದ ಸೂಚನೆ

​ಪ್ರಜಾವಾಣಿ ವಾರ್ತೆ
Published 31 ಮೇ 2023, 13:51 IST
Last Updated 31 ಮೇ 2023, 13:51 IST
.
.   

ನವದೆಹಲಿ: ವಿಶ್ವ ತಂಬಾಕು ವಿರೋಧಿ ದಿನದಂದು ಕೇಂದ್ರ ಆರೋಗ್ಯ ಸಚಿವಾಲಯ ‘ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ– 2004ಕ್ಕೆ’ ತಿದ್ದುಪಡಿ ಮಾಡಲಾದ ನಿಯಮಗಳನ್ನು ಪ್ರಕಟಿಸಿದೆ. ಚಿತ್ರಮಂದಿರಗಳು ಮತ್ತು ಟಿ.ವಿ ಕಾರ್ಯಕ್ರಮಗಳಲ್ಲಿ ಪ್ರದರ್ಶಿಸುವ ತಂಬಾಕು ವಿರೋಧಿ ಎಚ್ಚರಿಕೆಗಳನ್ನು ಒಟಿಟಿ ವೇದಿಕೆಗಳಲ್ಲೂ ಪ್ರದರ್ಶಿಸುವುದು ಕಡ್ಡಾಯ ಎಂದು ಅದು ಸೂಚಿಸಿದೆ.

ಒಟಿಟಿ ವೇದಿಕೆಗಳಲ್ಲಿ ಕಾರ್ಯಕ್ರಮದ ಆರಂಭ ಮತ್ತು ಮಧ್ಯದಲ್ಲಿ ಕನಿಷ್ಠ 30 ಸೆಕೆಂಡ್ ತಂಬಾಕು ವಿರೋಧಿ ಎಚ್ಚರಿಕೆ ನೀಡುವುದು ಕಡ್ಡಾಯ. ಕಾರ್ಯಕ್ರಮದಲ್ಲಿ ತಂಬಾಕು ಉತ್ಪನ್ನ ಅಥವಾ ಬಳಕೆಯ ದೃಶ್ಯಗಳಿದ್ದಾಗಲೂ ಪರದೆಯ ನಡುವಲ್ಲಿ ಎಚ್ಚರಿಕೆ ಸಂದೇಶವನ್ನು ಪ್ರಕಟಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಕಾರ್ಯಕ್ರಮದ ಆರಂಭ ಮತ್ತು ಮಧ್ಯದಲ್ಲಿ ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ಪರಿಣಾಮದ ಕುರಿತು ಕನಿಷ್ಠ 20 ಸೆಕೆಂಡ್‌ಗಳ ಆಡಿಯೊ-ದೃಶ್ಯ ಸಂದೇಶವನ್ನು ಬಿತ್ತರಿಸಬೇಕು ಎಂದು ಸೂಚಿಸಲಾಗಿದೆ.

ADVERTISEMENT

‘ತಂಬಾಕು ಕ್ಯಾನ್ಸರ್‌ಗೆ ಕಾರಣವಾಗುತ್ತದೆ’ ಅಥವಾ ‘ತಂಬಾಕು ಕೊಲ್ಲುತ್ತದೆ’ ಎಂಬ ಎಚ್ಚರಿಕೆಯ ಸಂದೇಶವನ್ನು ಬಿಳಿ ಬಣ್ಣದ ಪರದೆಯ ಮೇಲೆ ಕಪ್ಪು ಬಣ್ಣದ ದಪ್ಪ ಅಕ್ಷರಗಳಲ್ಲಿ ಪ್ರದರ್ಶಿಸಬೇಕು. ಸಿನಿಮಾ ಅಥವಾ ಕಾರ್ಯಕ್ರಮ ಯಾವ ಭಾಷೆಯಲ್ಲಿರುತ್ತದೋ ಅದೇ ಭಾಷೆಯಲ್ಲಿ ಎಚ್ಚರಿಕೆಯ ಸಂದೇಶವನ್ನು ಬಿತ್ತರಿಸಬೇಕು ಎಂದು ಹೇಳಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.