ಬೆಂಗಳೂರು: ಬಾಲಿವುಡ್ ನಟಿ ತಾಪ್ಸಿ ಪನ್ನು ಸೋಮವಾರ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.
ವಿಭಿನ್ನ ಚಿತ್ರಗಳ ಮೂಲಕ ಅವರು ಬಾಲಿವುಡ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
ಆದರೆ, ಚಿತ್ರರಂಗಕ್ಕೆ ಬರುವ ಮುಂಚೆ ಅವರು ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಈ ವಿಚಾರವನ್ನು ಸಂದರ್ಶನವೊಂದರಲ್ಲಿ ಅವರು ಬಹಿರಂಗಪಡಿಸಿದ್ದಾರೆ. ಮೊಬೈಲ್ ಮತ್ತು ಐಓಎಸ್ ಅಪ್ಲಿಕೇಶನ್‌ಗಳನ್ನು ತಾಪ್ಸಿ ಪನ್ನು ಅಭಿವೃದ್ಧಿಪಡಿಸುತ್ತಿದ್ದರು.
ಚಿತ್ರರಂಗಕ್ಕೆ ಬಾರದೇ ಹೋಗಿದ್ದರೆ ಅವರು ಸಾಫ್ಟ್‌ವೇರ್ ಇಂಜಿನಿಯರಿಂಗ್ ಕೆಲಸದಲ್ಲಿಯೇ ಭವಿಷ್ಯ ಕಂಡುಕೊಳ್ಳುತ್ತಿದ್ದರು ಎಂದು ತಾಪ್ಸಿ ಹೇಳಿಕೊಂಡಿದ್ದಾರೆ.
ಭರತನಾಟ್ಯಂ ಮತ್ತು ಕಥಕ್‌ನಲ್ಲಿಯೂ ತಾವು ಪರಿಣತಿ ಹೊಂದಿರುವುದಾಗಿ ತಾಪ್ಸಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.